ಭಟ್ಕಳ: ತಾಲೂಕಿನ ಪುರಸಭೆ ವ್ಯಾಪ್ತಿಯ ಹಳೆ ವೈಭವ್ ಹೋಟೆಲ್ ಪಕ್ಕದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ಸ್ಥಾಪಿಸಲು ಸಿದ್ಧತೆ ನಡೆದಿದ್ದು ಇದಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಸಮಾಜಸೇವಕ ಹಾಗೂ ಭಟ್ಕಳ ಪುರಸಭೆ ಸದಸ್ಯ ಫಯ್ಯಾಝ್ ಮುಲ್ಲಾ ಆಗ್ರಹಿಸಿದ್ದು, ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ .
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಮ್ಯೂಸ್ಮೆಂಟ್ ಪಾರ್ಕ್ಗಾಗಿ ಉದ್ದೇಶಿತ ಸ್ಥಳವು ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಮೀಪದಲ್ಲಿದ್ದು, ವಾಹನ ದಟ್ಟಣೆಯಿಂದ ಸಾರ್ವಜನಿಕರಿಗೆ ಅಪಾಯವನ್ನುಂಟುಮಾಡುತ್ತಿದೆ. ಅಸ್ತಿತ್ವದಲ್ಲಿರುವ ಅಮ್ಯೂಸ್ಮೆಂಟ್ ಪಾರ್ಕ್ ಬಳಿ ಹೆದ್ದಾರಿ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಮಗು ಪ್ರಾಣ ಕಳೆದುಕೊಂಡ ಘಟನೆಯನ್ನು ಮುಲ್ಲಾ ಉಲ್ಲೇಖಿಸಿದ್ದಾರೆ. ಇದರಿಂದಾಗಿ ಸಾರ್ವಜನಿಕರು ತೀರ ತೊಂದರೆಯನ್ನು ಅನುಭವಿಸುತ್ತಾರೆ. ಒಂದು ವೇಳೆ ಇದಕ್ಕೆ ಅನುಮತಿ ನೀಡಲೇಬೇಕು ಎಂದಾದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಡ್ಡಿಯಾಗದಂತೆ ರಾಷ್ಟ್ರೀಯ ಹೆದ್ದಾರಿಯಿಂದ ಸುರಕ್ಷಿತ ದೂರದಲ್ಲಿ ನಿರ್ಮಿಸಲಿ ಎಂದು ಅವರು ಸೂಚಿಸಿದ್ದಾರೆ. ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ಈ ಬಗ್ಗೆ ಕೂಡಲೇ ಗಮನಹರಿಸಬೇಕು ಎಂದು ಪಯ್ಯಾಝ್ ಮುಲ್ಲಾ ಒತ್ತಾಯಿಸಿದ್ದಾರೆ.