ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ತರಬೇತಿ ಸಂಸ್ಥೆಯು ಗ್ರಾಮೀಣ ಭಾಗದ ಯುವಕ ಮತ್ತು ಯುವತಿಯರಿಗೆ 10 ದಿನಗಳವರೆಗೆ ಪಾಸ್ಟಪುಢ್ ಸ್ಟಾಲ್ ಉದ್ಯಮಿ, ಕೋಳಿಸಾಕಾಣಿಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದಾರೆ.
ಆಸಕ್ತ 18 ರಿಂದ 45 ವರ್ಷ ವಯೋಮಿತಿ ಹೊಂದಿರವ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನೀತರ ಮಾಹಿತಿಯನ್ನು ಉಚಿತವಾಗಿ ತರಬೇತಿಯನ್ನು ನೀಡಲಾಗುವುದು.
ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ.
ಆಸಕ್ತ ಯುವಕ ಮತ್ತು ಯುವತಿಯರು ಹೆಚ್ಚಿನ ಮಾಹಿತಿಗಾಗಿ ನಿದೇರ್ಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಹಳಿಯಾಳ ಹಾಗೂ ದೂರವಾಣಿ ಸಂಖ್ಯೆ: 9980510717, 9482188780, 9632225123, 9483485489 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Canara Bank's RSETI in Haliyal Offers Free Rural Entrepreneurship Training for Youth and Women