ಭಟ್ಕಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸ್ ದಾಳಿ: ಓರ್ವ ಯುವತಿಯ ರಕ್ಷಣೆ, ಮಹಿಳಾ ಆರೋಪಿ ಬಂಧನ

Source: S O news | By Staff Correspondent | Published on 8th July 2023, 7:04 PM | Coastal News |

ಭಟ್ಕಳ: ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟವಾಣಿ ಗ್ರಾಮದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಸಂತ್ರಸ್ತೆ ಯುವತಿಯನ್ನು ರಕ್ಷಿಸಿದ್ದು ಮಹಿಳಾ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮಹಿಳೆಯನ್ನು ಕುಂಟವಾಣಿ ಗುಡಿಹಿತ್ತಲ್ ನಿವಾಸಿ ರಾಧಾ ಶೆಟ್ಟಿ(೪೫) ಎಂದು ಗುರುತಿಲಾಗಿದೆ. ಸಂತ್ರಸ್ತೆ ಬೆಂಗಳೂರು ಮೂಲದ ೨೮ ವರ್ಷದ ಯುವತಿಯನ್ನು ಪೊಲೀಸರು ರಕ್ಷಿಸಿದ್ದು ಕಾರವಾರದ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ರಾಧಾ ಶೆಟ್ಟಿ ತನ್ನ ಜೀವನ ಸಾಗಿಸಲು  ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಎನ್ನಲಾಗಿದ್ದು ಇದಕ್ಕಾಗಿ  ಬೆಂಗಳೂರು ಮೂಲದ ನೊಂದ 28 ವರ್ಷದ ಯುವತಿಯನ್ನು ಬಳಸಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಈಕೆ ಮುಬೈಲ್ ಮೂಲಕ ಗ್ರಾಹಕರನ್ನು ಕರೆ ಮಾಡುತ್ತಿದ್ದು, ಹಲವು ಬಾರಿ ಈಕೆಯ ದುಷ್ಕೃತ್ಯ ಕಂಡು ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದರೂ ಪೊಲೀಸರನ್ನೇ ಯಾಮಾರಿಸಿ ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳುತ್ತಿದ್ದಳು ಎಂದು ಹೇಳಲಾಗುತ್ತಿದೆ. ಆದರೆ ಶುಕ್ರವಾರದಂದು ಖಚಿತ ಮಾಹಿತಿ ಪಡೆದ ಪೊಲೀಸರು ಭಟ್ಕಳ ಡಿ.ವೈ.ಎಸ್.ಪಿ ಶ್ರೀಕಾಂತ ಕೆ, ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಾಳಿಯಲ್ಲಿ 3 ಮೊಬೈಲ್, ನಗದು ಹಣ ವಶಪಡಿಸಿಕೊಳ್ಳಲಾಗಿದೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಠಾಣೆ ಪಿ.ಎಸ್.ಐ ಮಯೂರ ಪಟ್ಟಣಶೆಟ್ಟಿ ಪ್ರಕರಣವನ್ನು ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

Read These Next

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 2 ಕಾಳಜಿ ಕೇಂದ್ರಗಳಲ್ಲಿ 59 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.

ಜಿಲ್ಲೆಯಲ್ಲಿ ಭಾನುವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು,  ಹೊನ್ನಾವರ ತಾಲ್ಲೂಕಿನಲ್ಲಿ 2 ಕಾಳಜಿ ಕೇಂದ್ರಗಳಲ್ಲಿ 59 ಮಂದಿ ...

ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ...

ಭಾರೀ ಮಳೆಯಿಂದ ಭಟ್ಕಳ ತಾಲೂಕಿನಲ್ಲಿ ತೀವ್ರ ಜಲಾವೃತ, ವಾಹನ ಸಂಚಾರ ಸ್ಥಗಿತ; ಶಾಲಾ ಕಾಲೇಜುಗಳಿಗೆ ರಜೆ

ಭಟ್ಕಳ: ಭಾನುವಾರ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಭಟ್ಕಳ ತಾಲೂಕಿನಾದ್ಯಂತ ಹಾನಿಯನ್ನುಂಟುಮಾಡಿದೆ, ಪ್ರಮುಖ ...

ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ನಿಶ್ಚಿತ ಪಿಂಚಣಿ  ನೀಡುವಂತೆ ಆಗ್ರಹ

ಭಟ್ಕಳ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಭಟ್ಕಳ ತಾಲೂಕು ಘಟಕದ ಪದಾಧಿಕಾರಿಗಳು  ಹಳೆಯ ಓಪಿಎಸ್ ...