ಬೆಂಗಳೂರು: 2024-25ನೇ ಸಾಲಿನ ರಾಜ್ಯ ಮಟ್ಟದ 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನವೆಂಬರ್ 01 ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “2024-24ನೇ ಸಾಲಿನ ರಾಜ್ಯ ಮಟ್ಟದ 69ನೇ ಕರ್ನಾಟಕ ರಾಜ್ಯೋತ್ಸವ” ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭದ ಧ್ವಜಾರೋಹಣವನ್ನು ನೆರವೇರಿಸಿ ನಂತರ ನಾಡಿನ ಜನತೆಗೆ ರಾಜ್ಯೋತ್ಸವ ಸಂದೇಶವನ್ನು ನೀಡಲಿರುವರು.
ಸಮಾರಂಭದಲ್ಲಿ ಮಾನ್ಯ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಾಲಾ ಸೀತಾರಾಮನ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಮಾನ್ಯ ಕೇಂದ್ರ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಕಾರ್ಮಿಕ ಹಾಗೂ ಉದ್ಯೋಗ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮಾನ್ಯ ಉಪ ಮುಖ್ಯಮಂತ್ರ ಡಿ.ಕೆ. ಶಿವಕುಮಾರ್ ಅವರು ಘನ ಉಪಸ್ಥಿತರಿರುವರು.
ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಭಾಗವಹಿಸಲಿದ್ದು, ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿರುವರು. ಸಮಾಂಭದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಲಿದ್ದು, ಸಚಿವರು, ಶಾಸಕರು ಸೇರಿದಂತೆ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿರಿರುವರು. ವಿವಿಧ ಶಾಲೆಗಳಿಂದ ಸುಮಾರು 14000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಾಲೆಯ ಶಿಕ್ಷಕರ ಸಮ್ಮುಖದೊಂದಿಗೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.