ಸಂಚಾರ ನಿಯಮ ಉಲ್ಲಂಘನೆ ಆರೋಪ; 207 ಮಂದಿಯ ಡ್ರೈವಿಂಗ್ ಲೈಸನ್ಸ್ ಅಮಾನತಿಗೆ ಶಿಫಾರಸು

Source: Vb | By I.G. Bhatkali | Published on 5th September 2023, 12:09 PM | Coastal News |

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಆ.21ರಿಂದ ಸೆ.3ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ 207 ಮಂದಿಯ (ಚಾಲಕರು/ಸವಾರರು) ಚಾಲನಾ ಅನುಜ್ಞಾ ಪತ್ರ (ಡ್ರೈವಿಂಗ್ ಲೈಸನ್ಸ್) ಅಮಾನತುಪಡಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.

ಅತೀವೇಗ, ದುಡುಕತನ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿದ 59, ಮದ್ಯಸೇವಿಸಿ ವಾಹನ ಚಲಾಯಿಸಿದ 8, ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸಿರುವ 34, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡಿದ 4, ಟ್ರಿಪಲ್ ರೈಡಿಂಗ್ ನಡೆಸಿದ 4, ಹೆಲೈಟ್ ಧರಿಸದೆ ಸವಾರಿ ಮಾಡಿದ 79, ಸೀಟ್ ಬೆಲ್ಟ್ ಹಾಕದಿರುವ 6, ಏಕಮುಖಸಂಚಾರ, ನೋ ಎಂಟ್ರಿ ನಿಯಮ ಉಲ್ಲಂಘಿಸಿದ 13 ಹೀಗೆ ಅಮಾನತಿಗೆ ಪ್ರಸ್ತಾವ ಸಲ್ಲಿಸಿರುವ ಪ್ರಕರಣಗಳು ಸೇರಿವೆ ಎಂದು ಆಯುಕ್ತರು ತಿಳಿಸಿದ್ದಾರೆ.

ಕಳೆದ 15 ದಿನಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನಿಷೇಧಿತ ಸ್ಥಳದಲ್ಲಿ ವಾಹನ ಪಾರ್ಕಿಂಗ್ ವಿರುದ್ಧ 407, ಕರ್ಕಶ ಹಾರ್ನ್ ಬಳಕೆ ವಿರುದ್ಧ 45, ಟಿಂಟ್ ಗ್ಲಾಸ್ ಹಾಕಿರುವುದರ ವಿರುದ್ಧ 50 ಮತ್ತು ಬಸ್‌ಗಳ ಫುಟ್‌ಬೋರ್ಡ್‌ನಲ್ಲಿ ಸಂಚಾರ ಮಾಡಿದವರ ವಿರುದ್ಧ 174 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

Read These Next

ಭಟ್ಕಳ: ತಹಶೀಲ್ದಾರ್ ಮತ್ತು ಸಹಾಯಕ ಆಯುಕ್ತರ ಕಛೇರಿಗಳ ಸಿಬ್ಬಂದಿ ವರ್ಗಾವಣೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಭಟ್ಕಳ: ಹಲವು ವರ್ಷಗಳಿಂದ ತಹಶೀಲ್ದಾರ್ ಕಛೇರಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ...

ಜಾಲಿಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ: ಅಂಜುಮನ್ ಬಿಎಡ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಭಟ್ಕಳ: ಅಂಜುಮನ್ ಕಾಲೇಜ್ ಆಫ್ ಎಜುಕೇಶನ್ (ಬಿಎಡ್) ವಿದ್ಯಾರ್ಥಿಗಳು ಜಾಲಿ ಬೀಚ್‌ನಲ್ಲಿ ಗುರುವಾರ ಬೀಚ್ ಸ್ವಚ್ಛತಾ ಅಭಿಯಾನವನ್ನು ...

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದ ಕ್ರಮಕ್ಕೆ ಸಂಸದ ಕಾಗೇರಿ ಕಿಡಿ: ಸೇಡಿನ ರಾಜಕೀಯ ಆರೋಪ

ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ದಿನದಿಂದ ದಿನಕ್ಕೆ ಹರಾಜಾಗುತ್ತಿದೆಯಾದರೂ, ...

ಕಾರವಾರ: ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ; ಈಶ್ವರ್ ಕಾಂದೂ

ಉತ್ತರ ಕನ್ನಡ​​​​​​​ ಜಿಲ್ಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ...