ಒಂದೇ ದಿನದಲ್ಲಿ ೭ ಮಂದಿಯ ಸಾವು; ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ

Source: SOnews | By Staff Correspondent | Published on 11th July 2024, 4:11 PM | State News |

ದಾವಣಗೆರೆ : ತಾಲೂಕಿನ ಹೊಸ ಕುಂದುವಾಡ ಗ್ರಾಮದಲ್ಲಿ ಗುರುವಾರ ಒಂದೇ ದಿನ ಪ್ರತ್ಯೇಕವಾಗಿ ಒಟ್ಟು ಏಳು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.  ನಾಲ್ಕು ಜನ ವಯೋಸಹಜದಿಂದ ಮೃತಪಟ್ಟಿದ್ದರೆ, ಉಳಿದ ಮೂವರು ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದಾರೆ. ಮಾರಿಯಕ್ಕ (70), ಸಂತೋಷ (30), ಈರಮ್ಮ (60), ಸುನಿಲ್ (25), ಶಾಂತಮ್ಮ (65), ಭೀಮಕ್ಕ (70), ಎರಡು ದಿನದ ನವಜಾತ ಶಿಶು ಸೇರಿದಂತೆ ಒಟ್ಟು ಏಳು ಮಂದಿ ಜನ ಮೃತಪಟ್ಟಿದ್ದಾರೆ.   ಗ್ರಾಮಕ್ಕೆ ತಹಶೀಲ್ದಾರ್ ಅಶ್ವಥ್ ಭೇಟಿ ನೀಡಿ ಈ ಕುರಿತು ಪರಿಶೀಲನೆ ನಡೆಸಿದ್ದಾರೆ. 

ಒಂದು ಕಡೆ ಸಾವುಗಳು ಸಂಭವಿಸಿದ್ದರೆ ಇನ್ನೊಂದು ಕಡೆ ಅಂತ್ಯಕ್ರಿಯೆಗಾಗಿ ಸ್ಥಳಾವಕಾಶದ ಕೊರತೆ ಕಾರಣ ಗ್ರಾಮಸ್ಥರು ಪರದಾಡಿದರು. ನಡೆಸಿ ವಿಚಾರವಾಗಿ ಪ್ರತಿಭಟನೆ ಕೂಡಾ ನಡೆಸಿದರು.  500 ಮನೆಗಳಿರುವ ಹೊಸ ಕುಂದುವಾಡ ಗ್ರಾಮಸ್ಥರು ಪಕ್ಕದ ಹಳೇ ಕುಂದುವಾಡ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದರು. ಅದರೆ, ಇತ್ತೀಚೆಗೆ ಎರಡು ಗ್ರಾಮಗಳ ನಡುವೆ ಹಬ್ಬದ ವಿಚಾರವಾಗಿ ಮನಸ್ಥಾಪ ಉಂಟಾದ ಕಾರಣದಿಂದ, ಅಂತ್ಯಕ್ರಿಯೆಗೆ ಈಗ ಹಳೇ ಕುಂದುವಾಡ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ನಿಮ್ಮ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.   ಇದರಿಂದ ಹೊಸ ಕುಂದುವಾಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.   ಸ್ಥಳಕ್ಕೆ ಜಿಲ್ಲಾಧಿಕಾರಿ ಬಂದು ಸಮಸ್ಯೆಯನ್ನು ಇತ್ಯರ್ಥ ಮಾಡಿಕೊಡಬೇಕು ಮತ್ತು ಗ್ರಾಮಕ್ಕೆ ಸ್ಮಶಾನವನ್ನು ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

Read These Next

ರಾಯಚೂರು ಜಿಲ್ಲೆಯ ಮಾನ್ವಿ ಬಳಿ ಸಾರಿಗೆ ಬಸ್ ಮತ್ತು ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳ ಸಾವು

ಮೃತಪಟ್ಟಿರುವ ವಿದ್ಯಾರ್ಥಿಗಳನ್ನು ಸಮರ್ಥ ಅಮರೇಶ(7) ಹಾಗೂ ಶ್ರೀಕಾಂತ್ ಮಾರೇಶ(12) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 15 ...

ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ರೈಲ್ವೆ ಇಲಾಖೆ ಅಸ್ತು – ಕೇಂದ್ರ ಸಚಿವ

ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ  ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ...

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ...