ಗುಡ್ಡ ಕುಸಿತ ಪ್ರಕರಣ ತಪ್ಪಿತಸ್ಥರ ವಿರುದ್ದ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Source: SOnews | By Staff Correspondent | Published on 22nd July 2024, 5:06 PM | Coastal News |

ಕಾರವಾರ: ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತದ ದಿನದಿಂದಲೂ ಜಿಲ್ಲಾಡಳಿತ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳಿA ರಕ್ಷಣಾ ಕಾರ್ಯಚರಣೆಯನ್ನು ಸತತವಾಗಿ ನಡೆಸಲಾಗುತ್ತಿದ್ದು, ಇಂದು ಸೇನೆ ವತಿಯಂದಲೂ ರಕ್ಷಣಾ ಕಾರ್ಯಾಚರಣೆ ನಡೆಯಲಿದೆ. ರಕ್ಷಣಾ ಕಾರ್ಯಾಚರಣೆ ಮುಗಿದ ನಂತರ ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಭಾನುವಾರ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಗುಡ್ಡ ಕುಸಿತ ಪ್ರದೇಶಕ್ಕೆ ಬೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಘಟನೆ ನಡೆದ ದಿನ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಚರಣೆಯ ವರದಿಯನ್ನು ಪಡೆಯಲಾಗುತ್ತಿದೆ. ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಯ ಕುಟುಂಬ ಸೇರಿದಂತೆ ಘಟನೆಯಲ್ಲಿ ಒಟ್ಟು 10 ಮಂದಿ ನಾಪತ್ತೆಯಾಗಿದ್ದು, ಅದರಲ್ಲಿ 7 ಮಂದಿಯ ಮೃತರಾಗಿದ್ದು, 3 ಮಂದಿ ಕಾಣೆಯಾಗಿದ್ದಾರೆ. ಕಾಣೆಯಾದವರ ಪತ್ತೆಗೆ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗುತ್ತಿದ್ದು, ಗುಡ್ಡ ಕುಸಿತದಿಂದ ಮೃತರಾದವರಿಗೆ 5 ಲಕ್ಷ ಪರಿಹಾರ ನೀಡಲಾಗಿದೆ. ಕಾಣೆಯಾದವರು ಒಂದು ವೇಳೆ ಮೃತರಾಗಿದ್ದರೆ ಅವರಿಗೂ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ಗುಡ್ಡ ಕುಸಿತದ ಮಣ್ಣು ನದಿಗೆ ಬಿದ್ದ ಪರಿಣಾಮ ನದಿಯ ಇನ್ನೊಂದು ದಡದಲ್ಲಿರುವ ಉಳುವರೆ ಗ್ರಾಮಕ್ಕೂ ಹಾನಿಯಾಗಿದ್ದು ಕೂಡಲೇ ಮನೆಯಾದ ಕುಟುಂಬಗಳಿಗೂ ಪರಿಹಾರ ನೀಡಲಾಗುತ್ತದೆ ಹಾಗೂ ಎನ್ಡಿಆರ್ಎಫ್ 24, ಎಸ್ಡಿಆರ್ಎಫ್ 44 ಮತ್ತು ಆರ್ಮಿಯ 44 ಸಿಬ್ಬಂದಿಗಳಿA ರಕ್ಷಣಾ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದರು.

0ದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ ಜಿಲ್ಲಾಡಳಿತ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ಇತರೆ ಇಲಾಖೆಗಳು ಸೇರಿ ಸತತವಾಗಿ ಘಟನೆ ನಡೆದ ದಿನದಿಂದ ಕಾರ್ಯಚರಣೆ ನಡೆಸಲಾಗುತ್ತಿದ್ದು, ಗುಡ್ಡ ಕುಸಿತದಿಂದ ಜಾರಿರುವ ಮುಕ್ಕಾಲು ಭಾಗ ಮಣ್ಣು ನದಿಗೆ ಬಿದ್ದಿದ್ದು, ಸ್ವಲ್ಪ ಭಾಗ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಕಳೆದ 4 ದಿನದಿಂದ ಬಹುತೇಕ ಮಣ್ಣನ್ನು ತೆಗೆಯಲಾಗಿದೆ ಎಂದರು.

Aಗಾವಳಿ ನದಿಗೆ ಬಿದ್ದ ಮಣ್ಣನ್ನು ರೇಡಾರ್ ಬಳಸಿ ಅಲ್ಲಿ ಏನಾದರೂ ದೊರೆಯುತ್ತಾ ಎಂಬುದರ ಬಗ್ಗೆ ನೌಕಾನೆಲೆ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ಆರ್ಮಿ ಅಧಿಕಾರಿಗಳಿಂದ ಸಲಹೆ ಕೇಳಿದ್ದು, ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಸ್ಥಳ ಪರೀಶಿಲಸಿ ವರದಿ ನೀಡಿದ್ದು, ಭೂ ಕುಸಿತದ ಪ್ರದೇಶವಾಗಿದ್ದು ಬಹಳ ಎಚ್ಚರಿಕೆ ಇರಬೇಕು ಎಂದು ತಿಳಿಸಿದ್ದಾರೆ ಎಂದರು.

ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ,ಶಾಸಕ ಸತೀಶ ಸೈಲ್, ಭೀಮಣ್ಣ ನಾಯ್ಕ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ,ಮುಖ್ಯಮಂತ್ರಿ ಅವರ ಅಪರ ಕಾರ್ಯದರ್ಶಿ ಅತೀಕ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಲಕ್ಷಿö್ಮÃಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಮತ್ತಿತರರು ಇದ್ದರು.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...