ಕುಮಟಾ-ಶಿರಸಿ ಹೆದ್ದಾರಿಯಲ್ಲಿ ನೆರೆ. ಸಂಚಾರ ಬಂದ್. ಹೊನ್ನಾವರದಲ್ಲೂ ಅಬ್ಬರಿಸುತ್ತಿದೆ ವರುಣ

Source: SO News | By Laxmi Tanaya | Published on 4th July 2024, 1:05 PM | Coastal News |

ಕುಮಟಾ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ.  ಕುಮಟಾ - ಶಿರಸಿ ಹೆದ್ದಾರಿಯಲ್ಲಿ  ನೀರು ನುಗ್ಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

ಕತಗಾಲ ಬಳಿ ರಸ್ತೆಯಲ್ಲಿ ನೀರು ತುಂಬಿದ್ದು ಸಂಚಾರ ಸ್ಥಗಿತವಾಗಿದೆ. ಇಲ್ಲಿನ ಚಂಡಿಕಾ ಹೊಳೆಯಲ್ಲಿ  ನೀರು ಹೆಚ್ಚಾಗಿದೆ. ರಸ್ತೆಯಲ್ಲಿ ತುಂಬಿದ್ದರಿಂದ ಬಸ್ ಸೇರಿದಂತೆ ಕೆಲ ವಾಹನಗಳು ಸಿಲುಕಿಕೊಂಡು ಸಂಚಾರ ಅಸ್ತವ್ಯಸ್ತವಾಗಿದೆ.

ಮಲೆನಾಡು ಸಿದ್ದಾಪುರದಲ್ಲಿ ಅಧಿಕ ಮಳೆ ಸುರಿಯುತ್ತಿರುವುದರಿಂದ ಹೊನ್ನಾವರದ ತಾಲೂಕಿನ ಗುಂಡಬಾಳ ನದಿಯಲ್ಲಿ ನೆರೆ ಪ್ರವಾಹ ಉಂಟಾಗಿದೆ. ಚಿಕ್ಕನಕೋಡ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರಿಜನಕೇರಿ, ಹಿತ್ತಲಕೇರಿ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುನ್ನೆಚ್ಚರಿಕೆಯಾಗಿ  ನಿವಾಸಿಗಳನ್ನ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

  ನದಿ ಪಾತ್ರದ ಕೆಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅನಿಲಗೋಡ್ ಜನತಾ ವಿದ್ಯಾಲಯ, ಹಿರಿಯ ಪ್ರಾಥಮಿಕ ಶಾಲೆ, ಗುಂಡಬಾಳ ಶಾಲೆ ನಂ-2, ಗುಂಡಿಬೈಲ್ ಶಾಲೆ ನಂ-2, ವಲ್ಕಿಯ ಹುಡ್ಗೋಡ ಇಟ್ಟಿಹಾದ ಪಬ್ಲಿಕ್ ಸ್ಕೂಲ್, ಗಂಜಿಗೆರೆ ಕಿರಿಯ ಪ್ರಾಥಮಿಕ ಶಾಲೆಗಳಿಗೆ ಡಿಸಿ ರಜೆ ಘೋಷಿಸಿದ್ದಾರೆ.

ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿದೆ. ಇದರಿಂದ ಹೊನ್ನಾವರ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

Read These Next

ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ...

ಭಾರೀ ಮಳೆಯಿಂದ ಭಟ್ಕಳ ತಾಲೂಕಿನಲ್ಲಿ ತೀವ್ರ ಜಲಾವೃತ, ವಾಹನ ಸಂಚಾರ ಸ್ಥಗಿತ; ಶಾಲಾ ಕಾಲೇಜುಗಳಿಗೆ ರಜೆ

ಭಟ್ಕಳ: ಭಾನುವಾರ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಭಟ್ಕಳ ತಾಲೂಕಿನಾದ್ಯಂತ ಹಾನಿಯನ್ನುಂಟುಮಾಡಿದೆ, ಪ್ರಮುಖ ...

ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ನಿಶ್ಚಿತ ಪಿಂಚಣಿ  ನೀಡುವಂತೆ ಆಗ್ರಹ

ಭಟ್ಕಳ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಭಟ್ಕಳ ತಾಲೂಕು ಘಟಕದ ಪದಾಧಿಕಾರಿಗಳು  ಹಳೆಯ ಓಪಿಎಸ್ ...

ಕಾರವಾರದಲ್ಲಿ ನೂತನ ಎಸ್ಪಿಯಾಗಿ ಎಂ. ನಾರಾಯಣ್ ಅಧಿಕಾರ ಸ್ವೀಕಾರ; ಕೋಮು ಸೌಹಾರ್ದತೆ ಕಾಪಾಡಲು ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದ್ಯತೆ

ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ...