ಹೊನ್ನಾವರ ಹೆದ್ದಾರಿಯಲ್ಲಿ ಅಂಬುಲೆನ್ಸ್ ಪಲ್ಟಿ ರೋಗಿಗೆ ಗಾಯ

Source: SO News | By Laxmi Tanaya | Published on 30th June 2024, 8:01 AM | Coastal News | Don't Miss |

ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ
ರೋಗಿಯೊಬ್ಬರನ್ನ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ವಾಹನ ಪಲ್ಟಿಯಾದ ಘಟನೆ ಸಂಭವಿಸಿದೆ.

ಇಲ್ಲಿನ ಹೊಸಪಟ್ಟಣ ಕ್ರಾಸ್ ಹತ್ತಿರ ಈ ಅವಘಡ ನಡೆದಿದೆ.  ಕುಮಟಾ ಕೆನರಾ ಹೆಲ್ತ್‌ಕೇರ್‌ನಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಪಾರ್ಶ್ವವಾಯು ತುತ್ತಾದ ರೋಗಿಯೊಬ್ಬರನ್ನ ಕರೆದುಕೊಂಡು ಹೋಗಲಾಗುತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ ಹೊಡೆದಿದೆ.

ಅಪಘಾತದ ಪರಿಣಾಮವಾಗಿ ಪಾರ್ಶ್ವವಾಯುವಿಗೆ ತುತ್ತಾದ ಕಮಲಾ ಪಟಗಾರ ಹಾಗೂ ಅಂಬುಲೆನ್ಸ್ ಚಾಲಕ ಸೋಮನಾಥ ನಾಯ್ಕ ಇವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.  ವಾಹನದಲ್ಲಿ  ಒಟ್ಟೂ ನಾಲ್ವರಿದ್ದರು. ಘಟನೆ ಬಳಿಕ ರೋಗಿ ಹಾಗೂ ರೋಗಿಯ ಸಂಬಂಧಿಕರನ್ನು ಬೇರೆ ಅಂಬುಲೆನ್ಸ್ ವಾಹನದಲ್ಲಿ  ಮಂಗಳೂರಿಗೆ ಕಳುಹಿಸಿಕೊಡಲಾಗಿದೆ. ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read These Next

ಭಟ್ಕಳದಲ್ಲಿ ಕರಾಟೆ ರೆಫ್ರಿ ತರಬೇತಿ; ತಪ್ಪು ನಿರ್ಣಯಗಳಿಂದ ಸ್ಪರ್ಧಾಳುವಿನ ಭವಿಷ್ಯ ಮಣ್ಣುಪಾಲಾಗುತ್ತದೆ-ಜೋಸ್

ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ಇಲ್ಲಿನ ಬಂದರ್ ರಸ್ತೆಯ ಕಮಲಾವತಿ ರಾಮನಾಥ ಶಾನಭಾಗ ...

ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಸಮಾಜ ಸೇವಕ ಎಸ್.ಎಸ್. ಕಾಮತ್ ರಿಗೆ ಗೌರವ ಸನ್ಮಾನ

ಭಟ್ಕಳ: ಪತ್ರಿಕಾ ದಿನಾಚರಣೆಯ ಅಂಗವಾಗಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿವೃತ್ತ ಬ್ಯಾಂಕ್ ನೌಕರ ಹಾಗೂ ಹಿರಿಯ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...