ಅಂಕೋಲ: ಗುಡ್ಡ ಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ; ಅಧುನಿಕ ತಂತ್ರಜ್ಞಾನ ಬಳಸಿ ಕಾರ್ಯಚರಣೆಗೆ ಸೂಚನೆ

Source: SOnews | By Staff Correspondent | Published on 21st July 2024, 5:07 PM | Coastal News | State News |

 

ಅಂಕೋಲ:ಭೀಕರ ಮಳೆಯಿಂದಾಗಿ ಅಂಕೋಲ ತಾಲೂಕಿನ ಶಿರೂರು ಬಳಿ ನಡೆದ ಗುಡ್ಡ ಕುಸಿತ ಪ್ರದೇಶಕ್ಕೆ ರವಿವಾರ ಭೇಟಿ ನೀಡಿದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಲಭ್ಯ ಇರುವ ಎಲ್ಲ ರೀತಿಯ ಆಧುನಿಕ ತಂತ್ರಜ್ಞಾನವನ್ನು ಬಳಸಿ ಕಾರ್ಯಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.  

ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.   ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ   ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.  ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.    ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.  ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.  ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌  

ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ?  ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮರಾಮನ್ ಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, "ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ" ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.  ಮುಖ್ಯಮಂತ್ರಿಗಳ ಈ  ಅನಿರಿಕ್ಷಿತ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬಾದರು.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...

ಬೆಂಗಳೂರು: ರಾಷ್ಟ್ರ ದಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾನಿಲಯವು ಸಂಶೋಧನೆ, ಅಭಿವೃದ್ಧಿಯಲ್ಲಿ ಪ್ರಮಖ ಪಾತ್ರ ವಹಿಸಿದೆ : ಕೆ.ಎಚ್.ಮುನಿಯಪ್ಪ

ರಾಷ್ಟ್ರದಲ್ಲಿ ನಮ್ಮ ಕೃಷಿ ವಿಶ್ವವಿದ್ಯಾನಿಲಯವು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಸಂಶೋಧನೆ ಮತ್ತು ಅಭಿವೃಧ್ಧಿಯಲ್ಲಿ ಪ್ರಮುಖ ...

ಬೆಂಗಳೂರು: ಭಾರಿ ಮಳೆಯಿಂದ ನಗರ ಜಲಾವೃತ; ಯಲಹಂಕ, ಟೆಕ್ ಪಾರ್ಕ್‌ಗಳು ಮತ್ತು ರೈಲು ಸೇವೆಗಳು ತತ್ತರಿಸಿತು

ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರವು ಜಲಾವೃತಗೊಂಡಿದ್ದು, ನಾಗರಿಕರ ದೈನಂದಿನ ಜೀವನ ಸಂಪೂರ್ಣ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...