ಮುರುಡೇಶ್ವರ ಸಮದ್ರದಲೆಗೆ ಬಲಿಯಾದ ಬೆಂಗಳೂರು ಮೂಲದ ವಿದ್ಯಾರ್ಥಿ; ಇಬ್ಬರ ರಕ್ಷಣೆ

Source: SOnews | By Staff Correspondent | Published on 13th June 2023, 6:41 PM | Coastal News | Don't Miss |


•    ಕಳೆದ ಎರಡು ದಿನಗಳ ಅಂತರದಲ್ಲಿ ನಡೆದ ಎರಡನೆ ಘಟನೆ 
•    ಸಾವಿನ ಒಡಲಾಗುತ್ತಿದೆಯೇ ಮುರುಡೇಶ್ವರ ಕಡಲು?

ಭಟ್ಕಳ : ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಸಮುದ್ರದಲೆಗೆ ಸಿಲುಕಿ ಸಾವನ್ನಪ್ಪಿದ್ದು ಇಬ್ಬರನ್ನು ಸ್ಥಳಿಯ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ  ಘಟನೆ ಮಂಗಳವಾರ ಮುರುಡೇಶ್ವರದಲ್ಲಿ ಜರಗಿದೆ. 

ಮೃತ ವಿದ್ಯಾರ್ಥಿಯನ್ನು ಬೆಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿ ಪವನ್ ನಾಯ್ಕ(೨೦) ಎಂದು ಗುರುತಿಸಲಾಗಿದೆ. 

ಆರು ಜನ ಸ್ನೇಹಿತರೊಂದಿಗೆ ಮುರುಡೇಶ್ವರಕ್ಕೆ ಪ್ರವಾಸ ಬಂದಿದ್ದ ಪವನ್ ಹಾಗೂ ಮತ್ತಿಬ್ಬರು ಮಂಗಳವಾರ ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಸಂದರ್ಭ ಕಡಲ ಅಲೆಗಳ ಅಬ್ಬರ ಜೋರಾಗಿದ್ದು ಪವನ್ ಅಲೆಗಳಲ್ಲಿ ಕೊಚ್ಚಿ ಹೋಗಿದ್ದು ಜೀವರಕ್ಷಕ ಸಿಬ್ಬಂದಿಗಳು ಇಬ್ಬರು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾಗಿ ತಿಳಿದುಬಂದಿದೆ.  

ಕಳೆದ ಎರಡು ದಿನಗಳ ಅಂತರದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿರುವ ಮುರುಡೇಶ್ವರ ಕಡಲು ಸಾವಿನ ಒಡಲಾಗಿ ಮಾರ್ಪಟ್ಟಿದೆ ಎಂಬ ಮಾತುಗಳು ಕೇಳಿ ಬರತೊಡಗಿದ್ದು, ಸೋಮವಾರ ಇದೇ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಕಣ್ಮರೆಯಾಗಿದ್ದು ವ್ಯಕ್ತಿಯ ಪತ್ತೆ ಇನ್ನೂ ಕೂಡ ಆಗಿಲ್ಲ. ಈ ನಡುವೆ ಮತ್ತೊಂದು ದುರ್ಘಟನೆ ಸಂಭವಿಸಿದೆ.  

ಬಿಫರ್‌ಜೊಯೆ ಚಂಡ ಮಾರುತದ ಪರಿಣಾಮ ಕರಾವಳಿ ಸಮದ್ರ ತೀರ ಪ್ರಕ್ಷುಬ್ದಗೊಂಡಿದ್ದು ಈ ನಡುವೆ ಸಮುದ್ರ ಕಾಣುವ ತವಕದಿಂದ ಮುರುಢೇಶ್ವರಕ್ಕೆ ಬರುವ ಪ್ರವಾಸಿಗರು ಸಮುದ್ರದ ಆಳ ಅಗಲದ ಅರಿವಿಲ್ಲದೆ ಸಮುದ್ರಕ್ಕಿಳಿಯುತ್ತಾರೆ. ಸ್ಥಳಿಯ ಆಡಳಿತ ಹಾಗೂ ಜೀವರಕ್ಷಕ ಸಿಬ್ಬಂದಿಗಳ ಎಚ್ಚರಿಕೆಯ ನಡುವೆಯೂ ಸಮುದ್ರಕ್ಕೆ ಧುಮುಕುತ್ತಾರೆ ಇದರಿಂದಾಗಿ ಅವಘಡಗಳು ಸಂಭವಿಸುತ್ತವೆ, ಮುರುಡೇಶ್ವರ ಕಡಲತೀರದಲ್ಲಿ ಪದೆ ಪದೆ ನಡೆಯುತ್ತಿರುವ ಈ ದುರಂತ ತಪ್ಪಿಸಬೇಕು ಎಂದಾದರೆ ಕಡಲತೀರಕ್ಕೆ ಹೋಗುವುದನ್ನು ಪ್ರವಾಸಿಗರಿಗಾಗಿ ನಿಷೇಧಿಸಬೇಕು, ಮಳೆಗಾಲ ಮುಗಿಯುವ ವರೆಗೆ ಸಮುದ್ರ ತಲುಪುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಬೇಕು, ಹೇಗೆ ಮಾಡಿದರೆ ಅನಾಹುತಗಳನ್ನು ತಪ್ಪಿಸಬಹುದು, ಎಂದು ಸ್ಥಳಿಯರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.  
 

Read These Next

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 2 ಕಾಳಜಿ ಕೇಂದ್ರಗಳಲ್ಲಿ 59 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.

ಜಿಲ್ಲೆಯಲ್ಲಿ ಭಾನುವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು,  ಹೊನ್ನಾವರ ತಾಲ್ಲೂಕಿನಲ್ಲಿ 2 ಕಾಳಜಿ ಕೇಂದ್ರಗಳಲ್ಲಿ 59 ಮಂದಿ ...

ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ...

ಭಾರೀ ಮಳೆಯಿಂದ ಭಟ್ಕಳ ತಾಲೂಕಿನಲ್ಲಿ ತೀವ್ರ ಜಲಾವೃತ, ವಾಹನ ಸಂಚಾರ ಸ್ಥಗಿತ; ಶಾಲಾ ಕಾಲೇಜುಗಳಿಗೆ ರಜೆ

ಭಟ್ಕಳ: ಭಾನುವಾರ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಭಟ್ಕಳ ತಾಲೂಕಿನಾದ್ಯಂತ ಹಾನಿಯನ್ನುಂಟುಮಾಡಿದೆ, ಪ್ರಮುಖ ...

ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ನಿಶ್ಚಿತ ಪಿಂಚಣಿ  ನೀಡುವಂತೆ ಆಗ್ರಹ

ಭಟ್ಕಳ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಭಟ್ಕಳ ತಾಲೂಕು ಘಟಕದ ಪದಾಧಿಕಾರಿಗಳು  ಹಳೆಯ ಓಪಿಎಸ್ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...