ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

Source: S O News | By I.G. Bhatkali | Published on 17th October 2024, 12:52 PM | State News | Don't Miss |

ಬೆಂಗಳೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ಹಾಗೂ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಾಹಿತಿ ತಂತ್ರಜ್ಞರ / ಸಲಹೆಗಾರರ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  

ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 60,000/- ರೂಪಾಯಿ ವೇತನ ನೀಡಲಾಗುವುದು. ಈ ಹುದ್ದೆಯು 6 ತಿಂಗಳ ಅವಧಿಯಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮುಖಾಂತರ ಆಯ್ಕೆ ಮಾಡÀಲಾಗುವುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ ವಯೋಮಿತಿ 35 ವರ್ಷಗಳು ಮೀರಿರಬಾರದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಪದವಿ/ ಕಂಪ್ಯೂಟರ್ ವಿಜ್ಞಾನ / ಐಟಿ ಅಥವಾ ಕಂಪ್ಯೂಟರ್ ಶಿಕ್ಷಣವನ್ನು ಪಡೆದಿರಬೇಕು. ಪ್ರತಿಷ್ಠಿತ ಸಂಸ್ಥೆ/ಕಂಪನಿಯಲ್ಲಿ ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್‍ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಬೆಂಗಳೂರು: ರಾಷ್ಟ್ರ ದಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾನಿಲಯವು ಸಂಶೋಧನೆ, ಅಭಿವೃದ್ಧಿಯಲ್ಲಿ ಪ್ರಮಖ ಪಾತ್ರ ವಹಿಸಿದೆ : ಕೆ.ಎಚ್.ಮುನಿಯಪ್ಪ

ರಾಷ್ಟ್ರದಲ್ಲಿ ನಮ್ಮ ಕೃಷಿ ವಿಶ್ವವಿದ್ಯಾನಿಲಯವು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಸಂಶೋಧನೆ ಮತ್ತು ಅಭಿವೃಧ್ಧಿಯಲ್ಲಿ ಪ್ರಮುಖ ...

ಬೆಂಗಳೂರು: ಭಾರಿ ಮಳೆಯಿಂದ ನಗರ ಜಲಾವೃತ; ಯಲಹಂಕ, ಟೆಕ್ ಪಾರ್ಕ್‌ಗಳು ಮತ್ತು ರೈಲು ಸೇವೆಗಳು ತತ್ತರಿಸಿತು

ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರವು ಜಲಾವೃತಗೊಂಡಿದ್ದು, ನಾಗರಿಕರ ದೈನಂದಿನ ಜೀವನ ಸಂಪೂರ್ಣ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...