ಕಾರವಾರ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Source: S O News | By I.G. Bhatkali | Published on 5th October 2024, 6:09 PM | Coastal News | Don't Miss |

ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ. ವರ್ಗ ಸೇರಿದ ವಿದ್ಯಾರ್ಥಿಗಳಿಂದ 2024-25 ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ. ಹಾಗೂ ಎಸ್.ಟಿ ರೂ. 2 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ರೂ 1 ಲಕ್ಷ ದೊಳಗಿರಬೇಕು.

ವಿದ್ಯಾರ್ಥಿಗಳು https://shp.karnataka.gov.in/bcwd  ಮೂಲಕ ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/bcwd  ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಮತ್ತು ದೂ.ಸಂ. 08382-226588 ನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Read These Next

ಕಾರವಾರ: ಗ್ರಾಮ ಪಂಚಾಯತಿಗಳಲ್ಲಿ "ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ" ಅಭಿಯಾನ : ಈಶ್ವರ ಕಾಂದೂ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳ ಎಲ್ಲ ಗ್ರಾಮ ...

ಉತ್ತರ ಕನ್ನಡದಲ್ಲಿ ಆಸ್ತಿಗಳ ನೋಂದಣಿಗೆ ಇ-ಆಸ್ತಿ ಮತ್ತು ಕಾವೇರಿ ತಂತ್ರಾಂಶದ ಸಂಯೋಜನೆ: ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ...

ಭಟ್ಕಳ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರ್ಸಿ ತಾಲೂಕಿನ ಮಾರಿಕಾಂಬಾ  ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ...