ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ.

Source: SO News | By Laxmi Tanaya | Published on 31st August 2024, 10:31 PM | State News | Don't Miss |

ಬೆಂಗಳೂರು : ಅಲ್ಪಸಂಖ್ಯಾತ ವರ್ಗದ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳ ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಆನಲೈನ್ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. 2023-24ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯ ಅಲ್ಪಸಂಖ್ಯಾತ ಇಲಾಖೆಯಡಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಎಸ್.ಪಿ.)ದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

1 ರಿಂದ 8ನೇ ತರಗತಿ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ (ಎಸ್.ಎಸ್.ಪಿ.) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಅಕ್ಟೋಬರ್ 31 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವೆಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿದ್ದು, ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂಪಾಯಿ ಮೀರಿರಬಾರದು. ಕಳೆದ ವರ್ಷ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳನ್ನು ಆಟೋ ರಿನೀವಲ್‌ ಎಂದು ಪರಿಗಣಿಸಲಾಗುತ್ತಿದ್ದು, ಅಂತಹ ವಿದ್ಯಾರ್ಥಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿಲ್ಲ. ಕಳೆದ ಬಾರಿ ಅರ್ಜಿ ಸಲ್ಲಿಸಿಯೂ ವಿದ್ಯಾರ್ಥಿ ವೇತನ ಬಾರದೆ ಇರುವ ವಿದ್ಯಾರ್ಥಿಗಳು ಈ ಬಾರಿ ಹೊಸ (ಫ್ರೆಶ್) ಅರ್ಜಿ ಸಲ್ಲಿಸಬೇಕು. ಸದ್ರಿ ವಿದ್ಯಾರ್ಥಿ ವೇತಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ ಆಧಾರ್ ಸೀಡಿಂಗ್ ಹಾಗೂ ಎನ್ ಪಿ ಸಿ ಐ ಮ್ಯಾಪಿಂಗ್ ಸಕ್ರಿಯವಾಗಿರುವುದು ಕಡ್ಡಾಯವಾಗಿದೆ.

ವಿದ್ಯಾರ್ಥಿಗಳು ಎಸ್.ಎಸ್.ಪಿ. ಪೋಸ್ಟ್ ಮೆಟ್ರಿಕ್‌ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ಅಲ್ಪಸಂಖ್ಯಾತ ಇಲಾಖಾ ವೈಬ್ ಸೈಟ್, ಸಹಾಯವಾಣಿ, ಅಲ್ಪಸಂಖ್ಯಾತ ತಾಲೂಕು ಮಟ್ಟದ ಮಾಹಿತಿ ಕೇಂದ್ರ ಅಥವಾ ಎಸ್.ಎಸ್.ಪಿ. ಪೋರ್ಟಲ್ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತ ಇಲಾಖಾ ಕಚೇರಿ ಪ್ರಕಟಣೆ ತಿಳಿಸಲಾಗಿದೆ.

Read These Next

ದೇಗುಲ ಪ್ರವೇಶಿಸಿದ್ದಕ್ಕೆ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಸವರ್ಣೀಯರಿಂದ ಹಲ್ಲೆ;21 ಮಂದಿಯ ಬಂಧನ

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ...

ವಿಶ್ವದಾಖಲೆಯ ಪ್ರಜಾಪ್ರಭುತ್ವದ ಸರಪಳಿ; 2,500 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ಸರಪಳಿ ಯಶಸ್ವಿ; ಸಿಎಂ, ಸಚಿವರು, ಶಾಸಕರು ಸಹಿತ 31 ಜಿಲ್ಲೆಗಳಿಂದ ಲಕ್ಷಾಂತರ ನಾಗರಿಕರು, ವಿದ್ಯಾರ್ಥಿ-ಯುವಜನರು ಭಾಗಿ

ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆಯು ಹಮ್ಮಿಕೊಂಡಿದ್ದ ಮಾನವ ಸರಪಳಿ ...

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗಾಗಿ ಜಿಲ್ಲಾಡಳಿತಕ್ಕೆ ಸಮಗ್ರ ಮಾರ್ಗಸೂಚಿಗಳು

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಬೀದರ್‍ನಿಂದ ಚಾಮರಾಜನಗರದವೆರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ...

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ಹಿಂಸೆಯನ್ನು ಅಳವಡಿಸಿ, ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಮಾಧ್ಯಮಗಳಲ್ಲಿ ಪ್ರಸಾರ ...

ಭಟ್ಕಳದಲ್ಲಿ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ‍್ಯವಂತ” ಸೀರತ್ ಅಭಿಯಾನಕ್ಕೆ ಚಾಲನೆ

ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು  ಶುಕ್ರವಾರ ಭಟ್ಕಳದ ವಿವಿಧ ಮಸೀದಿಗಳಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಜಗತ್ತಿನ ...