ಕಾರವಾರ: ಜೇನು ಸಾಕಾಣಿಕೆ ಕುರಿತು ತರಬೇತಿ ನೀಡಲು ಅರ್ಜಿ ಆಹ್ವಾನ

Source: S O News | By MV Bhatkal | Published on 19th October 2024, 10:30 AM | Coastal News | Don't Miss |

ಕಾರವಾರ: ತೋಟಗಾರಿಕೆ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ಸಿದ್ದಾಪುರ ತಾಲೂಕಿನ ಬೀಳಗಿ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನ.5 ರಿಂದ 4 ಫೆಬ್ರವರಿ 2025 ರವರೆಗೆ ರೈತ ಮಕ್ಕಳಿಗೆ 3 ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  

ಆಸಕ್ತರು ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ), ಶಿರಸಿ ಅಥವಾ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ), ಕಾರವಾರ ರವರ ಕಛೇರಿಯಲ್ಲಿ ಅಥವಾ https://horticulturedir.karnataka.gov.in  ಮೂಲಕ ಅ.21 ರಿಂದ ಅ.25 ರೊಳಗಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಶಿರಸಿಯ ತೋಟಗಾರಿಕೆ ಉಪನಿರ್ದೇಶಕರ ಕಛೇರಿಗೆ ಅ.28 ರೊಳಗಾಗಿ ಸಲ್ಲಿಸಬೇಕು.  

ಉತ್ತರ ಕನ್ನಡ ಜಿಲ್ಲೆಯ ಪ.ಜಾತಿಯ 1 ಅಭ್ಯರ್ಥಿ ಹಾಗೂ ಇತರೆ ವರ್ಗದ 2 ಅಭ್ಯರ್ಥಿಗಳನ್ನು ನಿಯಮಾನುಸಾರ ತರಬೇತಿಗೆ ಆಯ್ಕೆ ಮಾಡಲಾಗುವುದು, ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವತೆ ಶಿರಸಿಯ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read These Next

ಭಟ್ಕಳ: ಜಾಲಿ ಪ.ಪಂ. ವ್ಯಾಪ್ತಿಯ ಗೋವು ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು; ಮೂವರು ಆರೋಪಿಗಳ ಬಂಧನ

ಭಟ್ಕಳ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಂಧಿತರನ್ನು ಪಡಬಿದ್ರಿಯ ಜಬ್ಬಾರ ಹುಸೈನ್ ಬ್ಯಾರಿ (37), ಹಾಗೂ ಭಟ್ಕಳ ನೀವಾಸಿಗಳಾದ ಜಲೀಲ್ ...

ಭಟ್ಕಳ:  ಸಂತೆ ಮಾರುಕಟ್ಟೆ ರಸ್ತೆ ಬದಿ ವ್ಯಾಪರಸ್ಥರ ವಿರುದ್ಧ ಪುರಸಭೆ ಕಟ್ಟುನಿಟ್ಟಿನ ಕ್ರಮ ; ವಾಹನ ಸಂಚಾರ ಸುಗಮ

ಭಟ್ಕಳ: ತಾಲೂಕಿನ ಆಸ್ಪತ್ರೆ ರಸ್ತೆಯಲ್ಲಿ ಪ್ರತೀ ಭಾನುವಾರ ನಡೆಯುವ ಸಂತೆ ಮಾರುಕಟ್ಟೆಯಲ್ಲಿ  ವ್ಯಾಪಾರಿಗಳು ರಸ್ತೆ ಬದಿಯಲ್ಲೇ ...

ನ.7‌ ಕ್ಕೆ ಬೆಂಗಳೂರು ಚಲೋ:ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ-ರವೀಂದ್ರ ನಾಯ್ಕ

ನ.7‌ ಕ್ಕೆ ಬೆಂಗಳೂರು ಚಲೋ:ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ-ರವೀಂದ್ರ ನಾಯ್ಕ