ಕಾರವಾರ: ಟಿವಿ ರಿಪೇರಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Source: S O News | By MV Bhatkal | Published on 19th October 2024, 10:29 AM | Coastal News | Don't Miss |

ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಟಿವಿ ರಿಪೇರಿ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇದರಲ್ಲಿ ಇಲೆಕ್ಟ್ರಾನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4ಕೆ ಟಿವಿ LED ಮತ್ತು LCD ಟಿವಿಯಾ ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೈ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಸಹ ಇರುತ್ತದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ನವೆಂಬರ್ 20 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ: ಜಾಲಿ ಪ.ಪಂ. ವ್ಯಾಪ್ತಿಯ ಗೋವು ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು; ಮೂವರು ಆರೋಪಿಗಳ ಬಂಧನ

ಭಟ್ಕಳ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಂಧಿತರನ್ನು ಪಡಬಿದ್ರಿಯ ಜಬ್ಬಾರ ಹುಸೈನ್ ಬ್ಯಾರಿ (37), ಹಾಗೂ ಭಟ್ಕಳ ನೀವಾಸಿಗಳಾದ ಜಲೀಲ್ ...

ಭಟ್ಕಳ:  ಸಂತೆ ಮಾರುಕಟ್ಟೆ ರಸ್ತೆ ಬದಿ ವ್ಯಾಪರಸ್ಥರ ವಿರುದ್ಧ ಪುರಸಭೆ ಕಟ್ಟುನಿಟ್ಟಿನ ಕ್ರಮ ; ವಾಹನ ಸಂಚಾರ ಸುಗಮ

ಭಟ್ಕಳ: ತಾಲೂಕಿನ ಆಸ್ಪತ್ರೆ ರಸ್ತೆಯಲ್ಲಿ ಪ್ರತೀ ಭಾನುವಾರ ನಡೆಯುವ ಸಂತೆ ಮಾರುಕಟ್ಟೆಯಲ್ಲಿ  ವ್ಯಾಪಾರಿಗಳು ರಸ್ತೆ ಬದಿಯಲ್ಲೇ ...

ನ.7‌ ಕ್ಕೆ ಬೆಂಗಳೂರು ಚಲೋ:ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ-ರವೀಂದ್ರ ನಾಯ್ಕ

ನ.7‌ ಕ್ಕೆ ಬೆಂಗಳೂರು ಚಲೋ:ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ-ರವೀಂದ್ರ ನಾಯ್ಕ