ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್; ಇದು ಕಾಂಗ್ರೇಸ್ ಸರ್ಕಾರದ ಕೊಡುಗೆ

Source: S O News service | By Staff Correspondent | Published on 12th January 2017, 11:50 PM | State News | Editorial | Don't Miss |

ಬೆಂಗಳೂರು: ಮೊದನೆ ವರ್ಷದಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ನ್ನು ಉಚಿತವಾಗಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಗುರುವಾರ ಶಿಕ್ಷಣ ಇಲಾಖೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 154ನೆ ಜನ್ಮದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿರುವ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ನಮ್ಮ ವಿದ್ಯಾರ್ಥಿಗಳು ದೇಶ, ವಿದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧೆ ಮಾಡಬೇಕಾದ ಅನಿವಾರ್ಯತೆಯಿದೆ. ಇದಕ್ಕೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಎಲ್ಲ ಸರಕಾರಿ ಕಾಲೇಜಿನ ಮೊದಲ ವರ್ಷದಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಇವತ್ತಿನ ಜಾಗತಿಕ, ಆಧುನಿಕ ದಿನಮಾನಗಳಲ್ಲಿಯೂ ರಾಜ್ಯದಲ್ಲಿ ಶೈಕ್ಷಣಿಕ ಗುಣಮಟ್ಟ ಪರಿಣಾಮಕಾರಿಯಾಗಿ ಸುಧಾರಣೆಯಾಗಿಲ್ಲ. ಬೆಂಗಳೂರು, ಮೈಸೂರು ಹಾಗೂ ಮಂಗಳೂರನ್ನು ಹೊರತು ಪಡಿಸಿದರೆ, ಚಾಮರಾಜನಗರ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಲ್ಲಿ ಪದವಿ ಓದುವವರ ಸಂಖ್ಯೆ ತೀರ ಕಡಿಮೆಯಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹೈ-ಕರ್ನಾಟಕ ಭಾಗಗಳಲ್ಲಿ ಪದವಿ ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ರೆಸಿಡೆನ್ಸಿ ಕಾಲೇಜು’ಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ. ಆ ಮೂಲಕ ಪದವಿ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಿ ದೇಶಕ್ಕೆ ಅಗತ್ಯವಾದ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದರು.

ಬಿಎ, ಬಿಕಾಂ, ಬಿಎಸ್ಸಿ, ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣದ ಹೊರತಾಗಿಯೂ ಅನೇಕ ಕೌಶಲ್ಯಾಭಿವೃದ್ಧಿ ಕೋರ್ಸ್‌ಗಳಿವೆ ಎಂಬುದರ ಬಗ್ಗೆ ನಮ್ಮ ವಿದ್ಯಾರ್ಥಿಗಳಿಗೆ ಹೆಚ್ಚಿನ ಮಾಹಿತಿಯಿಲ್ಲ. ಈ ನಿಟ್ಟಿನಲ್ಲಿ ಕೌಶಲ್ಯಾಧಾರಿತ ವಿಶ್ವವಿದ್ಯಾಲಯ ಸ್ಥಾಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

ಮುಂದಿನ ಎಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ‘ಸ್ಕೂಲ್ ಆಫ್ ಎಕನಾಮಿಕ್ಸ್’ ಉದ್ಘಾಟನೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಸಂಬಂಧ ಬೆಂವಿವಿದಲ್ಲಿ 20 ಎಕರೆ ಜಮೀನನ್ನು ಪಡೆಯಲಾಗಿದ್ದು, ಇಡೀ ದೇಶದಲ್ಲೇ ‘ಮಾದರಿ ಸ್ಕೂಲ್ ಆಫ್ ಎಕನಾಮಿಕ್ಸ್’ ಸ್ಥಾಪಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿರುವ ಮಹಾರಾಣಿ ಕಾಲೇಜ್ ಹಾಗೂ ಮಂಡ್ಯದ ಸರಕಾರಿ ಕಾಲೇಜನ್ನು ಸ್ವಾಯತ್ತ ವಿಶ್ವವಿದ್ಯಾಲಯವನ್ನಾಗಿ ಘೋಷಿಸಲಾಗಿದೆ. ಹೀಗಾಗಿ ಮೂಲ ಭೂತ ಅವಶ್ಯಕತೆಗಳ ಅಭಿವೃದ್ಧಿಗಾಗಿ ಸುಮಾರು 55 ಕೋಟಿ ರೂ.ವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

ರಾಮಕೃಷ್ಣ ಮಠದ ಸ್ವಾಮಿ ವಿರೇಶಾನಂದ ಸ್ವಾಮೀಜಿ ಮಾತನಾಡಿ, ಸ್ವಾತಂತ್ರದ ಭಾರತದಲ್ಲಿ ಸ್ವಾಮಿ ವಿವೇಕಾನಂದರ ಜೀವನಾದರ್ಶಗಳನ್ನು ಯುವ ಜನತೆಗೆ ತಿಳಿಸಲು ವಿಫಲರಾಗಿದ್ದೇನೆ. ಅದರ ಪರಿಣಾಮವಾಗಿ ಸಮಾಜದಲ್ಲಿ ಅನೈತಿಕತೆಗಳು ಹೆಚ್ಚಾಗುತ್ತಿದೆ. ಇನ್ನು ಮುಂದಾದರು ಸ್ವಾಮಿ ವಿವೇಕಾನಂದರ ಕುರಿತು ಹೆಚ್ಚು, ಹೆಚ್ಚು ಪ್ರಚಾರ ಮಾಡುವ ಅಗತ್ಯವಿದೆ ಎಂದು ತಿಳಿಸಿದರು.

ನಮ್ಮ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರಗಳನ್ನು ಕೊಡುತ್ತಿವೆಯೇ ವಿನಃ ಅರ್ಹತೆಯನ್ನು ಕೊಡುತ್ತಿಲ್ಲ. ಪಠ್ಯಗಳ ಜೊತೆ ಜೊತೆಗೆ ಜೀವನದ ವೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಅಜಯ್ ನಾಗಭೂಷಣ್ ಮತ್ತಿತರರಿದ್ದರು.

Read These Next

ನ.21 ರಿಂದ ಮುರ್ಡೇಶ್ವರದಲ್ಲಿ ಮತ್ಸ ಮೇಳ; ಪ್ರಥಮ ಬಾರಿಗೆ ಉತ್ತರಕನ್ನಡದಲ್ಲಿ ಆಯೋಜನೆ; ಮೂರು ದಿನಗಳ ಕಾಲ ಮೀನು ಖಾದ್ಯ ಪ್ರಿಯರಿಗೆ ಹಬ್ಬ

ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ವಿಶ್ವ ಮೀನುಗಾರಿಕಾ ದಿನಾಚರಣೆಯ ಅಂಗವಾಗಿ ನ.21ರಿಂದ ನ.23ರವರೆಗೆ ...

ಶಿಗ್ಗಾಂವಿ: ಬ್ಯಾಲೆಟ್ ಬಾಕ್ಸ್‌ ಗಳು ಚರಂಡಿಯಲ್ಲಿ ಪತ್ತೆ; ಉಪಚುನಾವಣೆ ಮುಗಿದ ಮರುದಿನವೇ ನಡೆದ ಘಟನೆ

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಜಿಲ್ಲೆಯ ಯತ್ತಿನಹಳ್ಳಿ ಗ್ರಾಮದ ಬಳಿಯ ...

ಮತ್ತೆ ಶರಣರ ತಲೆದಂಡವಾಗದಿರಲಿ

‘‘ವೇದಕ್ಕೆ ಒರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳನಿಕ್ಕುವೆ ತರ್ಕದ ಬೆನ್ನ ಬಾರನೆತ್ತುವೆ, ಆಗಮದ ಮೂಗ ಕುಯ್ಯುವೆ, ನೋಡಯ್ಯ ಮಹಾದಾನಿ ...

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ...

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್, ಇತರ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್

ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.