ಭಟ್ಕಳ: ತಹಶೀಲ್ದಾರ್ ಮತ್ತು ಸಹಾಯಕ ಆಯುಕ್ತರ ಕಛೇರಿಗಳ ಸಿಬ್ಬಂದಿ ವರ್ಗಾವಣೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

Source: SOnews | By Staff Correspondent | Published on 20th September 2024, 11:45 PM | Coastal News |

 

ಭಟ್ಕಳ: ಹಲವು ವರ್ಷಗಳಿಂದ ತಹಶೀಲ್ದಾರ್ ಕಛೇರಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಗೆ ಒತ್ತಾಯಿಸಿ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕದ ವತಿಯಿಂದ ಹಳೆ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರದಿಂದ ಆರಂಭಿಸಲಾಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತರು, ಭಟ್ಕಳ ತಹಶೀಲ್ದಾರ್ ಕಚೇರಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಕೆಲವರು ಹಲವು ವರ್ಷಗಳಿಂದ ನಿಯಮಗಳ ಉಲ್ಲಂಘನೆ ಮೂಲಕ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿದರು. ಇಂತಹ ಅಧಿಕಾರಿಗಳ ತಕ್ಷಣ ವರ್ಗಾವಣೆಯನ್ನು ಮಾಡಿ, ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆ ತರಬೇಕೆಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಶಂಕರ ನಾಯ್ಕ ಮಾತನಾಡಿ, “ಇಲ್ಲಿನ ಕೆಲವು ಸಿಬ್ಬಂದಿ ದಲ್ಲಾಳಿಗಳ ಕೆಲಸಕ್ಕೆ ಸೀಮಿತಗೊಂಡಿದ್ದಾರೆ. ಇದರ ಪರಿಣಾಮವಾಗಿ ಸಾರ್ವಜನಿಕರ ಕೆಲಸ ಮಾಡಲು ಸಮಯವಿಲ್ಲ. ಇನ್ನೂ ಮುಂದೆ ಇದನ್ನು ಸಹಿಸಲಾಗದು,” ಎಂದು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯಾಧ್ಯಕ್ಷ ಚೆನ್ನಯ್ಯ ವಸ್ತ್ರದ್ ಮಾತನಾಡಿ, "ವರ್ಗಾವಣೆಗೆ ಒಳಪಡದ ಅಧಿಕಾರಿಗಳು ಪರಸ್ಪರ ತಹಶೀಲ್ದಾರ್ ಮತ್ತು ಸಹಾಯಕ ಆಯುಕ್ತರ ಕಚೇರಿಗಳ ನಡುವೆ ವರ್ಗಾವಣೆಗೊಂಡು, ಅವಶ್ಯಕತೆಗಳಿಗೆ ಸ್ಪಂದಿಸುತ್ತಿಲ್ಲ. ಈ ಸ್ಥಿತಿಯನ್ನು ಬದಲಾಯಿಸುವ ತನಕ ನಮ್ಮ ಧರಣಿ ಮುಂದುವರಿಯಲಿದೆ," ಎಂದರು.

ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿ ರಾಜು ನಾಯ್ಕ, ಭಟ್ಕಳ ತಾಲೂಕು ಅಧ್ಯಕ್ಷ ನಾಗೇಂದ್ರ ನಾಯ್ಕ , ಉಪಾಧ್ಯಕ್ಷ ವಸಂತ ದೇವಾಡಿಗ,   ತಾಲೂಕು ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ, ಜೇವರ್ಗಿ ತಾಲೂಕು ಅಧ್ಯಕ್ಷ ವೀರೇಶ ಮಠ,  ಪ್ರಧಾನ ಕಾರ್ಯದರ್ಶಿ, ವಿಶ್ವನಾಥ ಪಾಟೀಲ, ಕಲಬುರ್ಗಿ ಜಿಲ್ಲಾ ಉಪಾಧ್ಯಕ್ಷ ಶ್ರೀಶೈಲ ಬಿಲ್ಲಾಳ ಮತ್ತು ಪದಾಧಿಕಾರಿಗಳು, ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

Read These Next

ಜಾಲಿಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ: ಅಂಜುಮನ್ ಬಿಎಡ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಭಟ್ಕಳ: ಅಂಜುಮನ್ ಕಾಲೇಜ್ ಆಫ್ ಎಜುಕೇಶನ್ (ಬಿಎಡ್) ವಿದ್ಯಾರ್ಥಿಗಳು ಜಾಲಿ ಬೀಚ್‌ನಲ್ಲಿ ಗುರುವಾರ ಬೀಚ್ ಸ್ವಚ್ಛತಾ ಅಭಿಯಾನವನ್ನು ...

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡದ ಕ್ರಮಕ್ಕೆ ಸಂಸದ ಕಾಗೇರಿ ಕಿಡಿ: ಸೇಡಿನ ರಾಜಕೀಯ ಆರೋಪ

ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಮಾನ ಮರ್ಯಾದೆ ರಾಷ್ಟ್ರಮಟ್ಟದಲ್ಲಿ ದಿನದಿಂದ ದಿನಕ್ಕೆ ಹರಾಜಾಗುತ್ತಿದೆಯಾದರೂ, ...

ಕಾರವಾರ: ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ; ಈಶ್ವರ್ ಕಾಂದೂ

ಉತ್ತರ ಕನ್ನಡ​​​​​​​ ಜಿಲ್ಲೆಯಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ...