ಐರೋಪ್ಯ ರಾಷ್ಟ್ರಗಳ ಶಿಕ್ಷಣ ವ್ಯವಸ್ಥೆ ಮನುಷ್ಯರನ್ನು ಧರ್ಮದ ಶತ್ರುಗಳನ್ನಾಗಿ ರೂಪಿಸುತ್ತಿದೆ-ಮೌಲಾನ ರಾಬೆ‌ಅ ನದ್ವಿ

Source: S O News service | By Staff Correspondent | Published on 21st December 2016, 6:42 PM | Coastal News | Islam | Don't Miss |

ಭಟ್ಕಳ: ಪ್ರಸಕ್ತ ಪಾಶ್ಚಾತ್ಯ ಶಿಕ್ಷಣ ವ್ಯವಸ್ಥೆಯ ಕುರಿತಂತೆ ಕಠು ವಿಮರ್ಶೆ ಮಾಡಿದ ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ಅಧ್ಯಕ್ಷ ಮೌಲಾನಾ  ಸೈಯ್ಯದ್ ಮುಹಮ್ಮದ್ ರಾಬೆ‌ಅ ಹಸನಿ ನದ್ವಿ, ಐರೋಪ್ಯ ರಾಷ್ಟ್ರಗಳ ಶಿಕ್ಷಣ ವ್ಯವಸ್ಥೆ ಮನುಷ್ಯರನ್ನು ಧರ್ಮದ ಶತ್ರುಗಳನ್ನಾಗಿ ರೂಪಿಸುತ್ತಿದೆ ಎಂದು ಹೇಳಿದರು.

ಅವರು ಬುಧವಾರ ಇಲ್ಲಿನ ಅಲಿ ಪಬ್ಲಿಕ್ ಸ್ಕೂಲ್ ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ಶೈಕ್ಷಣಿಕ ವಿಚಾರ ಗೋಷ್ಟಿಯಲ್ಲಿ ತಮ್ಮ ವಿಚಾರಗಳನ್ನು ವ್ಯಕ್ತಪಡಿಸುತ್ತಿದ್ದರು. ಶಿಕ್ಷಣ ಪಠ್ಯಕ್ರಮದಲ್ಲಿನ  ಉಡಾಳತನವು ಪಸ್ತುತ ಕೆಡುಕುಗಳಿಗೆ ಕಾರಣವಾಗುತ್ತಿದ್ದು ನವ ಪೀಳಿಗೆಯ ಮನಸ್ಸುಗಳನ್ನು ಕಲೂಷಿತಗೊಳಿಸುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು. 

ದೇಶದಲ್ಲಿ ಬದಲಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ನವಪೀಳಿಗೆಯಲ್ಲಿ ಇಸ್ಲಾಮಿನ ನೈಜ ಚಿಂತನೆಗಳನ್ನು  ಉಳಿಸಿ ಬೆಳೆಸುವುದರ ಜೊತೆಗೆ ಅವರನ್ನು ದೇಶದ ಅತ್ಯುನ್ನತ ನಾಗರೀಕರನ್ನಾಗಿ ರೂಪಿಸುವಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ವಿಚಾರಗೋಷ್ಟಿಯಲ್ಲಿ ಅಭಿಪ್ರಾಯಪಟ್ಟ ಶಿಕ್ಷಣ ತಜ್ಞರು, ನವಪೀಳಿಗೆಯ ಮನಸ್ಸುಗಳಲ್ಲಿ ಇಸ್ಲಾಮ್ ಕುರಿತಂತೆ  ತಪ್ಪು ಕಲ್ಪನೆಗಳು ಜನ್ಮತಾಳುತ್ತಿರುವ ಕುರಿತು ಆತಂಕವ್ಯಕ್ತಪಡಿಸಿದರು. 

ಶಿಕ್ಷಣ ತಜ್ಞ ಡಾ.ವಲಿರಹ್ಮಾನಿ, ಲಖ್ನೋ ನದ್ವತುಲ್ ಉಲೇಮಾದ ವ್ಯವಸ್ಥಾಪಕ ಮೌಲಾನ ವಾಝ್ಹೆ ರಷೀದ್ ನದ್ವಿ ಜಮಾ‌ಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಸೈಯ್ಯದ್ ಸಾದುಲ್ಲಾ ಹುಸೇನಿ ಸೇರಿದಂತೆ ದೇಶದ ವಿವಿಧ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯ ಹಾಗೂ ಮದರಸಾಗಳ ೨೫೦ಕ್ಕೂ ಹೆಚ್ಚು ಶಿಕ್ಷಣ ತಜ್ಞರು ವಿಚಾರಗೋಷ್ಠಿಯಲ್ಲಿ ಭಾಗವಹಿಸಿದ್ದರು.

Read These Next

ಸಾಮಾಜಿಕ ಜಾಲಾ ತಾಣದಲ್ಲಿ ವೈರಲ್ ಆಗುತ್ತಿರುವ ಸತೀಶ್ ಆಚಾರ್ಯ ಅವರ “ಏಕ್ ಹೈ ತೊ ಸೈಫ್ ಹೈ”  ಅದ್ಭುತ ಕಾರ್ಟೂನ್

ಭಟ್ಕಳ: ಹಿಂದೂ ಮತಗಳನ್ನು ಕ್ರೂಢಿಕರಿಸಲು ಉತ್ತರಪ್ರದೇಶದ ಸಿ.ಎಂ. ಯೋಗಿ ಆಧಿತ್ಯನಾತ್ ನೀಡಿದ ಏಕ್ ಹೈ ತೋ ಸೇಫ್ ಹೈ” ರಾಜಕೀಯ ...

ಸಿ.ಎ.ಖಲೀಲ್ ಸಾಹೇಬರ ನಿಧನಕ್ಕೆ ಭಟ್ಕಳದ ಐದು ಕೇಂದ್ರಿಯ ಸಂಘಟನೆಗಳಿಂದ ಜಂಟಿ ಸಂತಾಪ ಸಭೆ

ಭಟ್ಕಳ: ಇಫ್ತಿಖಾರ್-ಇ-ಖೌಮ್ ಬಿರುದಾಂಕಿತ, ಪ್ರಸಿದ್ಧ ಉದ್ಯಮಿ ಮತ್ತು ಸಮಾಜ ಸೇವಕ ಸೈಯ್ಯದ್ ಖಲೀಲರ‍್ರಹ್ಮಾನ್ (ಸಿ.ಎ. ಖಲೀಲ್) ಅವರ ...

ಮೂರು ಕ್ಷೇತ್ರಗಳಲ್ಲಿ ಜಯಭೇರಿ: ಭಟ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಭಟ್ಕಳ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮೂರು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದು, ಭಟ್ಕಳದಲ್ಲಿ ...

ನೈತಿಕ ಮೌಲ್ಯಗಳು ಮತ್ತು ಸಚ್ಚಾರಿತ್ರ್ಯ: ಪ್ರವಾದಿ ಮುಹಮ್ಮದ್ (ಸ) ಅವರ ಬದುಕಿನ ದಾರ್ಶನಿಕತೆ

ಇಂದು ಸಮಾಜದಲ್ಲಿ ಜೀವಿಸುವ ಪ್ರತಿಯೊಬ್ಬ ವ್ಯಕ್ತಿ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳೆಂದರೆ ನೈತಿಕ ಮೌಲ್ಯಗಳ ಅಧಪತನ ಮತ್ತು ...

ಈದ್-ಉಲ್-ಫಿತರ್ ಪ್ರತಿನಿಧಿಸುವ ಮೌಲ್ಯಗಳು; ಮನುಷ್ಯ ಪ್ರೇಮ, ಕರುಣೆ, ಅನುಕಂಪ  ಮತ್ತು ಸಹಾನುಭೂತಿ

ಕೋಮು ಧ್ರುವೀಕರಣ ಮತ್ತು ಧಾರ್ಮಿಕ ಅಸಹಿಷ್ಣುತೆಯ ಹಿನ್ನೆಲೆಯಲ್ಲಿ, ಈದ್-ಉಲ್-ಫಿತರ್‌ನ ಮಹತ್ವವು ಹೆಚ್ಚಿನ ಪ್ರಾಮುಖ್ಯತೆಯನ್ನು ...

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ

ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ...