ಜೈಲಿನಿಂದಲೇ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ; ಇಂದು ಸು. ಕೋರ್ಟ್‌ನಲ್ಲಿ ನಡೆಯಲಿದ್ದ ಕೇಜ್ರಿವಾಲ್ ಜಾಮೀನು ವಿಚಾರಣೆ

Source: Vb | By I.G. Bhatkali | Published on 26th June 2024, 7:57 AM | National News |

ಹೊಸದಿಲ್ಲಿ: ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರನ್ನು ತಿಹಾರ್ ಜೈಲಿನಿಂದ ಮಂಗಳವಾರ ರಾತ್ರಿ ಬಂಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿ ವಿಚಾರಣೆ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿತ್ತು. ಅದಕ್ಕಿಂತ ಮೊದಲೇ ಸಿಬಿಐ ಅವರನ್ನು ಬಂಧಿಸಿದೆ.

ಸೋಮವಾರ, ಕೇಂದ್ರ ತನಿಖಾ ಸಂಸ್ಥೆಯು ತಿಹಾರ್ ಜೈಲಿನಲ್ಲಿ ಅರವಿಂದ ಕೇಜ್ರವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿತ್ತು. ಸಿಬಿಐ ಬುಧವಾರ ಅರವಿಂದ ಕೇಜ್ರವಾಲ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ ಎಂದು ತಿಳಿದು ಬಂದಿದೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, "ಅರವಿಂದ ಕೇಜ್ರವಾಲ್ ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆಯುವ ಸಾಧ್ಯತೆ ಇರುವ ಸಮಯದಲ್ಲಿ, ಕೇಂದ್ರವು ಪಿತೂರಿ ನಡೆಸುತ್ತಿದೆ ಎಂದು ನನಗೆ ಮೂಲಗಳು ತಿಳಿಸಿವೆ ಎಂದರು.

Read These Next

ಕೋಲ್ಕತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ; ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

ಕೋಲ್ಕತಾದ ಆರ್.ಜಿ.ಕರ್ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ...

ಕೋಲ್ಕತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ; ಇಬ್ಬರು ವೈದ್ಯರು, ಮಾಜಿ ಬಿಜೆಪಿ ಸಂಸದೆಗೆ ಕೋಲ್ಕತಾ ಪೊಲೀಸರ ಸಮನ್ಸ್

ನಗರದ ಆರ್.ಜಿ. ಕರ್ ವೈದ್ಯಕೀಯ ಕಾಲೇಜ್;ನಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಕಿರಿಯ ವೈದ್ಯೆಯ ಗುರುತನ್ನು ...

ಬಾಂಗ್ಲಾದೇಶದಲ್ಲಿ ಮುಸ್ಲಿಮ್ ದಾಳಿಗಳ ಕುರಿತು ಸುಳ್ಳು ಮಾಹಿತಿಗಳನ್ನು ಹರಡುತ್ತಿರುವ ಕಟ್ಟರ್ ಬಲಪಂಥೀಯರು; ಬಿಬಿಸಿ ವರದಿ

ಬಾಂಗ್ಲಾದೇಶದಲ್ಲಿ ಉರಿಯುತ್ತಿರುವ ಕಟ್ಟಡಗಳು, ಭಯಾನಕ ಹಿಂಸಾಚಾರ ಮತ್ತು ನೆರವಿಗಾಗಿ ರೋದಿಸುತ್ತಿರುವ ಮಹಿಳೆಯರ ಆಘಾತಕಾರಿ ...