ಕಾರವಾರ: ದೀಪಾವಳಿ ಹಬ್ಬವನ್ನು ಬೆಳಕಿನ ಹಬ್ಬವಾಗಿ ಮತ್ತು ಪರಿಸರ ಸ್ನೇಹಿಯಾಗಿ ಆಚರಿಸಿ; ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ

Source: S O News | By MV Bhatkal | Published on 23rd October 2024, 12:26 PM | Coastal News |

ಕಾರವಾರ:  ಪ್ರತಿ ವರ್ಷವು ದೀಪಾವಳಿ ಹಬ್ಬವನ್ನು ಸಾಂಪ್ರ‍್ರದಾಯಿಕವಾಗಿ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ದೀಪಾವಳಿ ಹಬ್ಬವನ್ನು ದೀಪಗಳ ಸಾಲಿನ ಮೂಲಕ ಆಚರಿಸಿ, ಮನಸ್ಸಿನ ಕತ್ತಲನ್ನು ಹೊರದೂಡಿ ಬೆಳಕಿನಡೆಗೆ ಸಾಗುವ ಸಂದೇಶವನ್ನು ಸಾರುವುದು ಸಾಮಾನ್ಯವಾಗಿತ್ತು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಷೇಧಿತ ನಿಷೇಧಿತ ಪಟಾಕಿ ಸಿಡಿಸಿದರೆ ಶಬ್ಧ ಮಾಲಿನ್ಯ, ವಾಯು ಮಾಲಿನ್ಯ ಹಾಗೂ ಘನತ್ಯಾಜ್ಯ ಉತ್ಪಾದನೆಯಾಗಿ ಪರಿಸರ ಮಾಲಿನ್ಯ ಹೆಚ್ಚಾಗುವುದರಿಂದ ಜಿಲ್ಲೆಯ ಸಾರ್ವಜನಿಕರು ಈ ಬಾರಿಯ ದೀಪಾವಳಿಯ ಹಬ್ಬವನ್ನು ಆದಷ್ಟು ದೀಪಗಳನ್ನು ಬೆಳಗಿಸಿ ಸಂಭ್ರಮಿಸುವAತೆ ಮತ್ತು ಮಾಲಿನ್ಯರಹಿತ ದೀಪಾವಳಿ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯ ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದAತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ (ಹಾಸ್ಟೆಲ್), ವೃದ್ಧರ ಅನಾಥಾಶ್ರಮ, ಸುತ್ತಮುತ್ತ ಹಾಗೂ ಇತರೇ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ಪಟಾಕಿ ಸಿಡಿತದಿಂದ ಬರುವ ಹೊಗೆ ಅಸ್ತಮಾ ರೋಗಿಗಳು ಹೃದ್ರೋಗಿಗಳು, ವಯೋವೃದ್ಧರು, ಚಿಕ್ಕ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುತ್ತದೆ. ಪ್ರತಿ ವರ್ಷ ಈ ರೀತಿಯ ಹಲವಾರು ಪ್ರಕರಣಗಳು ನಡೆಯುತ್ತಿರುತ್ತವೆ.

ಜಿಲ್ಲೆಯಲ್ಲಿನ ಎಲ್ಲಾ ಪಟಾಕಿ ಮಾರಾಟ ಮಾಡುವ ಮಳಿಗೆಗಳಿಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಸೂಚಿಸಿದೆ. ಸಾರ್ವಜನಿಕರು ಪಟಾಕಿ ಖರೀದಿಸುವ ಮುನ್ನ ಪಟಾಕಿಯ ಮೇಲಿರುವ ಹಸಿರು ಚಿಹ್ನೆಗಳನ್ನು ಪರೀಕ್ಷಿಸಿ ಖರೀದಿಸಬೇಕು ಹಾಗೂ ಪಟಾಕಿಯನ್ನು ಸಿಡಿಸುವ ಸಂದರ್ಭದಲ್ಲಿ ಚಿಕ್ಕ ಮಕ್ಕಳ ಜೊತೆ ಪೋಷಕರು ಇದ್ದು, ಅವಗಡಗಳು ಸಂಭವಿಸದAತೆ ಜಾಗೃತೆ ವಹಿಸಬೇಕು.

ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು. ಕೇವಲ ಹಸಿರು ಪಟಾಕಿ ಮಾರಾಟಕ್ಕೆ, ಬಳಕೆಗೆ ಮಾತ್ರ ಅವಕಾಶವಿದೆ. ರಾಷ್ಟೀಯ ಹಸಿರು ಪ್ರಾಧಿಕಾರದ ಆದೇಶದಂತೆ, ಶಿಫಾರಸ್ಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಸರ್ವೋಚ್ಛ ನ್ಯಾಯಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತದೆ. ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ CSIR (Council of Scientific & Industrial Research )& NEERI (National Environmental Engineering Research Institute) ಚಿಹ್ನೆ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಿದ್ದು, ಅಂತಹ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಸಾರ್ವಜನಿಕರು ಉಪಯೋಗಿಸಲು ಅವಕಾಶ ಇರುತ್ತದೆ. ರಾತ್ರಿ 8 ರಿಂದರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶವಿದೆ.

ದೀಪಾವಳಿ ಹಬ್ಬವನ್ನು ದೀಪಗಳನ್ನು ಬೆಳಗುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನುಆಚರಿಸುವಂತೆ ಹಾಗೂ ಯಾವುದೇ ಅವಗಡಗಳಾಗದಂತೆ ಸುರಕ್ಷತೆಯಿಂದ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ನಿಗದಿತ ಸಮಯದಲ್ಲಿ ಸಿಡಿಸುವಂತೆ ತಿಳಿಸಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯ ಸಮಸ್ತ ನಾಗರಿಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನುತಿಳಿಸಿದ್ದಾರೆ.

Read These Next