ಎನ್. ಎಸ್. ಎಸ್ ಘಟಕದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಸಂಪನ್ನ

Source: S O News | By MV Bhatkal | Published on 2nd October 2024, 8:23 PM | Coastal News | Don't Miss |

ಭಟ್ಕಳ: ಮಹಾತ್ಮ ಗಾಂಧೀಜಿ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಸೇವಾ ಯೋಜನೆಯು ದೇಶಾದ್ಯಂತ ಕಾಲೇಜುಗಳಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2ರ ವರೆಗೆ 'ಸ್ವಚ್ಛ ತಾ ಹೀ ಸೇವಾ' ಎಂಬ ಕಾರ್ಯಕ್ರಮದ ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿತ್ತು ಅದರಂತೆ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಎನ್. ಎಸ್. ಎಸ್ ಘಟಕವು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ, 2 ಅಕ್ಟೋಬರ್ ದಂದು ಭಟ್ಕಳದ ಮುಂಡಳ್ಳಿ ಗ್ರಾಮದ ನೆಸ್ತಾರ ಕಡಲ ತೀರದಲ್ಲಿ ಪ್ಲಾಸ್ಟಿಕ್ ಮುಕ್ತ ಬೀಚ್ ಅಭಿಯಾನವನ್ನು ಹಮ್ಮಿ ಕೊಂಡಿತು.

ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಉನ್ನತ ಭಾರತ ಅಭಿಯಾನ, ಯುತ್ ರೆಡ್ ಕ್ರಾಸ್ ಘಟಕ, ರೊಟರಾಕ್ಟ ಘಟಕದ ಸ್ವಯಂಸೇವಕರ ಸಹಕಾರದೊಂದಿಗೆ ಸಮುದ್ರ ತೀರವನ್ನು ಸ್ವಚ್ಛ ಗೊಳಿಸಲಾಯಿತು. "ಗಾಂಧಿ ಇನ್ ಮಿ" ಎಂಬ ಡಿಜಿಟಲ್ ಪ್ರತಿಜ್ಞೆಯನ್ನು ಪಡೆಯುವ ಮಾಹಿತಿಯನ್ನು ಸರ್ವರಿಗೂ ನೀಡಲಾಯಿತು. ಸ್ವಯಂಸೇವಕರು, ಕಾರ್ಯಕ್ರಮ ಅಧಿಕಾರಿಗಳು, ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
 

Read These Next

ಭಟ್ಕಳ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರ್ಸಿ ತಾಲೂಕಿನ ಮಾರಿಕಾಂಬಾ  ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ...

ರಾಷ್ಟ್ರ ಮಟ್ಟದ ಡಿಸ್ಕ್ ಥ್ರೋ ಸ್ಪರ್ಧೆಯಲ್ಲಿ ಬೆಳಕೆ ನಾಗೇಂದ್ರ ನಾಯ್ಕ ತೃತೀಯ ಸ್ಥಾನ

೪ನೇ ಭಾರತೀಯ ಓಪನ್ ಯು-೨೩ ಅಥ್ಲೆಟಿಕ್ಸ್ ಸ್ಪರ್ಧೆ ೨೦೨೪ರ ಜೂನಿಯರ್ ಮತ್ತು ಅಂಡರ್ -೨೩ ಕ್ರೀಡಾಕೂಟದ ರಾಷ್ಟ್ರಮಟ್ಟದ ಡಿಸ್ಕ್ ಥ್ರೋ ...

ಭಟ್ಕಳ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿರ್ಸಿ ತಾಲೂಕಿನ ಮಾರಿಕಾಂಬಾ  ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ...

ನ.೭ ರಂದು ಬೃಹತ್ ಅರಣ್ಯವಾಸಿಗಳ ಬೆಂಗಳೂರು ಚಲೋ: ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹ

ಅವೈಜ್ಞಾನಿಕ ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುವ ಹಿನ್ನಲೆಯಲ್ಲಿ ರಾಜ್ಯಾದಂತ ...