ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ : ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ

Source: S O News | By I.G. Bhatkali | Published on 18th July 2024, 9:15 PM | Coastal News |

ಕಾರವಾರ:  ಜಿಲ್ಲೆಯಲ್ಲಿ ಅಪಾಯಕಾರಿಯಾಗಿರುವ ಶಾಲೆಗಳು ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ, ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡುವಂತೆ ಕಂದಾಯ ಇಲಾಖೆಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷಿö್ಮÃಪ್ರಿಯ ಸೂಚನೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ ಕಾಂಪೌ0ಡ್ ಗೋಡೆ, ಶಾಲಾ ಕಟ್ಟಡ ಹಾಗೂ ಗುಡ್ಡ ಕುಸಿತ ಸಂಭವಿಸುವ ಪ್ರದೇಶಗಳ ಬಳಿಯಲ್ಲಿ ವಾಸ ಮಾಡುತ್ತಿರುವ ಸಾರ್ವಜನಿಕರ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಆ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಹಾಗೂ ಕಾಳಜಿ ಕೇಂದ್ರಗಳನ್ನು ಗುರುತಿಸಿಟ್ಟುಕೊಂಡು, ಈ ಕುರಿತ ಸಂಪೂರ್ಣ ವರದಿಯನ್ನು ಸಂಬ0ದಪಟ್ಟ ಅಧಿಕಾರಿಗಳು ಸಹಿ ಮಾಡಿ ದೃಢೀಕರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು .

ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮತ್ತು ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಲಿಖಿತವಾಗಿ ಸೂಚನೆಗಳನ್ನು ನೀಡಿ, ಅವರಿಂದ ಸಹಿ ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರತಿಯೊಂದು ಮನೆಗಳನ್ನು ಸರ್ವೆ ಮಾಡುವಂತೆ ಹಾಗೂ ಎರಡು ದಿನಗಳಲ್ಲಿ ದೃಢೀಕೃತ ವರದಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು .

ಜಿಲ್ಲೆಯಲ್ಲಿನ ಎಲ್ಲಾ ಇಂಜಿನಿಯರಿAಗ್ ವಿಭಾಗದ ಕಾರ್ಯನಿರ್ವಹಿಸುವ ಇಲಾಖೆಗಳು ತಮ್ಮ ಬಳಿ ಇರುವ ಯಂತ್ರೋಪಕರಣಗಳು ಹಾಗೂ ವಾಹನ ಚಾಲಕರು ಮತ್ತು ಮಾಲೀಕರ ಸಂಪೂರ್ಣ ವಿವರಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡುವಂತೆ ಸೂಚಿಸಿz, ಅÀವರು ಮುಖ್ಯ ರಸ್ತೆ ಹೊರತುಪಡಿಸಿ ಇರುವ ಇತರೇ ಪರ್ಯಾಯ ರಸ್ತೆಗಳ ಕುರಿತು ಸಂಪೂರ್ಣ ವಿವರಗಳನ್ನು ಪೋಲೀಸ್ ಇಲಾಖೆಗೆ ಮತ್ತು ಜಿಲ್ಲಾಧಿಕಾರಿ ಕಚೇರಿಗೆ ನೀಡುವಂತೆ ಸೂಚಿಸಿದರು.

 ಜಿಲ್ಲೆಯ ಯಾವುದೇ ಅಧಿಕಾರಿಗಳು ಕೇಂದ್ರ ಬಿಟ್ಟು ಕೇರಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಮತ್ತು ಉಪ ವಿಭಾಗಾಧಿಕಾರಿಗಳ ವಾಹನಗಳಿಗೆ ತುರ್ತು ಸಂಪರ್ಕಗಾಗಿ ವಯರ್ಲೆಸ್ ಸಾಧನಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು .

            ಶಾಲಾ ಮಕ್ಕಳಿಗೆ ಪ್ರಾಕೃತಿಕ ವಿಕೋಪಗಳ ನಿರ್ವಹಣೆ ಕುರಿತಂತೆ ಸೂಕ್ತ ಅರಿವು ಮೂಡಿಸುವಂತೆ ಮತ್ತು ಇಂತಹ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ತಮ್ಮ ಅಗತ್ಯ ವಸ್ತುಗಳನ್ನು, ದಾಖಲೆಗಳನ್ನು ಸಂರಕ್ಷಿಸಿಕೊಳ್ಳುವ ವಿಧಾನಗಳ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಕುರಿತು ಮಾಹಿತಿ ಶಿಕ್ಷಣ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗಾಗಿ, ಜನ ,ಜಾನುವಾರುಗಳ ರಕ್ಷಣೆ, ಸ್ಥಳಾಂತರ, ಪುರ್ನವಸತಿ, ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಆರೋಗ್ಯ ರಕ್ಷಣೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು ಎಲ್ಲಾ ಸಮಿತಿಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ, ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವAತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಲುಷಿತ ಕುಡಿಯುವ ನೀರಿನಿಂದ ಯಾವುದೇ ರೋಗಗಳು ಹರಡದಂತೆ ಎಲ್ಲಾ ಜಲಮೂಲಗಳನ್ನು ಪರೀಕ್ಷಿಸಿ ವರದಿ ನೀಡುವಂತೆ ಹಾಗೂ ಆರೋಗ್ಯ ಇಲಾಖೆಯಿಂದ ಎಲ್ಲಾ ಔಷದಗಳ ದಾಸ್ತಾನು ಸಮರ್ಪಕವಾಗಿರುವಂತೆ ಮತ್ತು ಅಂಬುಲೆನ್ಸ್ ಗಳು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸೂಚನೆ ನೀಡಿದರು.

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ತಮಗೆ ವಹಿಸಲದ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ದ ವಿಕೋಪ ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಸಮ್ವನಯದಿಂದ ಕಾರ್ಯನಿರ್ವಹಿಸಿ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಮುಂದಾಗಬೇಕು ಎಂದರು.

            ಸಭೆಯಲ್ಲಿ ಜಿಲ್ಲಾ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ , ಡಿಎಫ್‌ಓ ರವಿಶಂಕರ್, ಎ.ಎಸ್ಪಿ. ಜಗದೀಶ್ , ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next