ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

Source: S O News | By MV Bhatkal | Published on 17th October 2024, 12:34 PM | Coastal News |

ಕಾರವಾರ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ಪಡೆದುಕೊಳ್ಳುವ ವಿಧಾನವನ್ನು ಅಳವಡಿಸುವ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ರಿತೇಶ್ ಕುಮಾರ್ ಸಿಂಗ್ ಹೇಳಿದರು. ಅವರು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಈಗಾಗಲೇ ಪ್ರತೀ ಜಿಲ್ಲೆಯಲ್ಲೂ ಆಯ್ದ ಶಾಲೆಗಳಲ್ಲಿ ಪೈಲಟ್ ಯೋಜನೆಯಾಗಿ ಮಕ್ಕಳ ಹಾಜರಾತಿಯನ್ನು ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರ ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ಪಡೆದುಕೊಂಡಿದ್ದ ಯೋಜನೆಯು ಯಶಸ್ವಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸಹ ಪೈಲಟ್ ಆಗಿ ಅಳವಡಿಸಿದ್ದ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ಯಾವುದೇ ಸಮಸ್ಯೆಯಿಲ್ಲವೆಂದು ತಿಳಿಸಿದ್ದು, ಈ ವ್ಯವಸ್ಥೆಯನ್ನೂ ರಾಜ್ಯಾದ್ಯಂತ ವಿಸ್ತರಿಸುವ ಚಿಂತನೆ ಇದೆ ಎಂದರು.

ಈ ವ್ಯವಸ್ಥೆಯಿಂದ ರಾಜ್ಯದ ಪ್ರತೀ ಶಾಲೆಗಳಲ್ಲಿ ಪ್ರತೀ ದಿನದ ವಿದ್ಯಾರ್ಥಿಗಳ ನಿಖರ ಹಾಜರಾತಿ ಮತ್ತು ಗೈರು ಹಾಜರಾದ ವಿವರ ದೊರೆಯಲಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರೂಪಿಸಿರುವ ಅನೇಕ ಯೋಜನೆಗಳ ಅನುಷ್ಠಾನದಲ್ಲಿ ಸಂಪೂರ್ಣ ಪಾರದರ್ಶಕತೆ ಬರಲಿದೆ.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...