ಮೇ 24ರಂದು ಭಟ್ಕಳದಲ್ಲಿ ಹಜ್ ಯಾತ್ರಿಕರಿಗಾಗಿ ತರಬೇತಿ ಮತ್ತು ಲಸಿಕಾ ಶಿಬಿರ

Source: S O News Service | By Staff Correspondent | Published on 22nd May 2023, 8:45 PM | Coastal News | Don't Miss |

ಭಟ್ಕಳ: ಕರ್ನಾಟಕ ರಾಜ್ಯ ಹಜ್ ಕಮಿಟಿ ವತಿಯಿಂದ ಈ ವರ್ಷ ಉತ್ತರಕನ್ನಡ ಜಿಲ್ಲೆಯಿಂದ ಹಜ್ ಯಾತ್ರೆ ಕೈಗೊಳ್ಳುವವರಿಗೆ  ಮೇ 24 ರಂದು ಭಟ್ಕಳದ ತಂಝೀಮ್ ಸಂಸ್ಥೆಯ ಆಶ್ರಯದಲ್ಲಿ ಹಜ್ ತರಬೇತಿ ಮತ್ತು ಲಸಿಕಾ ಶಿಬಿರ ಆಯೋಜಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ನ ಸಹಕಾರದೊಂದಿಗೆ ಜಿಲ್ಲೆಯಿಂದ ಹಜ್ ಯಾತ್ರೆ ಕೈಗೊಳ್ಳುವ ೧೫೧ ಹಜ್ ಯಾತ್ರಿಕರಿಗೆ ಭಟ್ಕಳದ ತಂಝೀಮ್ ಸಭಾಂಗಣದಲ್ಲಿ ಬೆ.10 ಗಂಟೆಯಿಂದ ಸಂಜೆ 4:30ರ ವರೆಗೆ ತರಬೇತಿ ಹಾಗೂ ಲಸಿಕೆಯನ್ನು ನೀಡಲಾಗುವುದು. ಈ ಶಿಬಿರದಲ್ಲಿ ಪಾಲ್ಗೊಳ್ಳುವವರು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಕೋವಿಡ್-19 ಎರಡು ಡೋಸ್ ಪಡೆದ ಪ್ರಮಾಣಪತ್ರವನ್ನು ತರುವುದು ಕಡ್ಡಾಯವಾಗಿರುತ್ತದೆ. 

Hajj Training and Vaccination Camp Organized in Bhatkal for Uttara Kannada Pilgrims

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಅಧ್ಯಕ್ಷ ಅಝೀಝುರ‍್ರಹ್ಮಾನ್ ರುಕ್ನುದ್ದೀನ್ ನದ್ವಿ, ಉತ್ತರಕನ್ನಡ ಜಿಲ್ಲೆಯಲ್ಲಿ ಭಟ್ಕಳದಿಂದ ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಹಜ್ ಯಾತ್ರಗೆ ತೆರಳುತ್ತಿದ್ದು ಈ ಬಾರಿ ಭಟ್ಕಳದಿಂದ 102 ಮಂದಿ ಹಜ್ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಪ್ರತಿ ವರ್ಷ ಜಿಲ್ಲಾ ಕೇಂದ್ರದಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗುತ್ತಿತ್ತು. ಇದರಿಂದಾಗಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಭಟ್ಕಳದ ಯಾತ್ರಿಗಳಿಗೆ ತೊಂದರೆಯಾಗಿತ್ತು. ಇದನ್ನು ಮನಗೊಂಡು ಭಟ್ಕಳದಲ್ಲಿಯೆ ತರಬೇತಿ ಹಾಗೂ ಲಸಿಕೆ ನೀಡುವ ಶಿಬಿರವನ್ನು ಆಯೋಜಿಸಲು ಪ್ರಯತ್ನಿಸಲಾಗಿದೆ. 

ಶಿಬಿರಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿದೆ. ಹೊರಗಡೆಯ ಶಿಬಿರಾರ್ಥಿಗಳಿಗೆ ಮದ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿದ್ದು ಜಿಲ್ಲೆಯಿಂದ ಹಜ್ ಯತ್ರೆ ಕೈಗೊಳ್ಳುವವರು ಈ ಶಿಬಿರದಲ್ಲಿ ಪಾಲ್ಗೊಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

Read These Next

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 2 ಕಾಳಜಿ ಕೇಂದ್ರಗಳಲ್ಲಿ 59 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.

ಜಿಲ್ಲೆಯಲ್ಲಿ ಭಾನುವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು,  ಹೊನ್ನಾವರ ತಾಲ್ಲೂಕಿನಲ್ಲಿ 2 ಕಾಳಜಿ ಕೇಂದ್ರಗಳಲ್ಲಿ 59 ಮಂದಿ ...

ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ. ಸಯೀದ್ ಇಸ್ಮಾಯಿಲ್

ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ...

ಭಾರೀ ಮಳೆಯಿಂದ ಭಟ್ಕಳ ತಾಲೂಕಿನಲ್ಲಿ ತೀವ್ರ ಜಲಾವೃತ, ವಾಹನ ಸಂಚಾರ ಸ್ಥಗಿತ; ಶಾಲಾ ಕಾಲೇಜುಗಳಿಗೆ ರಜೆ

ಭಟ್ಕಳ: ಭಾನುವಾರ ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಭಟ್ಕಳ ತಾಲೂಕಿನಾದ್ಯಂತ ಹಾನಿಯನ್ನುಂಟುಮಾಡಿದೆ, ಪ್ರಮುಖ ...

ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ನಿಶ್ಚಿತ ಪಿಂಚಣಿ  ನೀಡುವಂತೆ ಆಗ್ರಹ

ಭಟ್ಕಳ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಭಟ್ಕಳ ತಾಲೂಕು ಘಟಕದ ಪದಾಧಿಕಾರಿಗಳು  ಹಳೆಯ ಓಪಿಎಸ್ ...

ಸಚಿವ ವೈದ್ಯರ ಗೃಹ ಕಚೇರಿಯಲ್ಲಿ ಜನತಾ ದರ್ಶನ; ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ರಾಜಿಯಿಲ್ಲ ಎಂದ ಸಚಿವ

ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ...