ಕಾರವಾರ: ಜಿಲ್ಲೆಯಲ್ಲಿ ಅ.19 ರಿಂದ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಯಾಥತ್ರೆ

Source: S O News | By MV Bhatkal | Published on 17th October 2024, 12:33 PM | Coastal News | Don't Miss |

ಕಾರವಾರ: ಕರ್ನಾಟಕ ರಾಜ್ಯ ಮೈಸೂರು ಎಂದು ನಾಮಕರಣವಾಗಿ 1 ನವಂಬರ್ 2023 ಕ್ಕೆ 50 ವರ್ಷ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥಯಾತ್ರೆಯು ಕರ್ನಾಟಕ ರಾಜ್ಯದಾದ್ಯಂತ 2-11-2023 ರಿಂದ 29 ಅಕ್ಟೊಬರ್2024 ವರೆಗೆ ಕರ್ನಾಟಕ ರಾಜ್ಯದಾದ್ಯಂತ ಸಂಚರಿಸುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅ.19 ರಿಂದ ಅ.29 ವರೆಗೆ ಸಂಚರಿಸಲಿದೆ.

ಅ.19 ರಂದು ರಥವು ಭಟ್ಕಳಕ್ಕೆ ಆಗಮಿಸಲಿದ್ದು, ಅ.20 ರ ವರೆಗೆ ಭಟ್ಕಳ ತಾಲೂಕಿನಲ್ಲಿ ರಥ ಸಂಚರಿಸಲಿದೆ. ಅ. 21 ರಂದು ಬೆಳಗ್ಗೆ 9 ಗಂಟೆಗೆ ಹೊನ್ನಾವರ ತಾಲೂಕಿಗೆ ಆಗಮಿಸಿ, ತಾಲೂಕಿನಲ್ಲಿ ಸಂಚರಿಸಲಿದೆ. ಅ.22 ರಂದು ಬೆಳಗ್ಗೆ 9 ಗಂಟೆಗೆ ಕಾರವಾರ ತಾಲೂಕಿಗೆ ಆಗಮಿಸಿ, ತಾಲೂಕಿನಲ್ಲಿ ಸಂಚಾರಿಸಲಿದೆ. ಅ.23 ರಂದು ಬೆಳಗ್ಗೆ 9 ಗಂಟೆಗೆ ಯಲ್ಲಾಪುರ ತಾಲೂಕಿಗೆ ಆಗಮಿಸಿ, ತಾಲೂಕಿನಲ್ಲಿ ಸಂಚರಿಸಲಿದೆ. ಅ.24 ರಂದು ಬೆಳಗ್ಗೆ 9 ಗಂಟೆಗೆ ಜೋಯಿಡಾ ತಾಲೂಕಿಗೆ ಆಗಮಿಸಿ, ತಾಲೂಕಿನಲ್ಲಿ ಸಂಚರಿಸಲಿದೆ. ಅ.25 ರಂದು ಬೆಳಗ್ಗ 9 ಗಂಟೆಗೆ ದಾಂಡೇಲಿ ತಾಲೂಕಿಗೆ ಆಗಮಿಸಿ, ತಾಲೂಕಿನಲ್ಲಿ ಸಂಚರಿಸಲಿದೆ. ಅ.26 ರಂದು ಬೆಳಗ್ಗೆ 9 ಗಂಟೆಗೆ ಹಳಿಯಾಳ ತಾಲೂಕಿಗೆ ಆಗಮಿಸಿ, ತಾಲೂಕಿನಲ್ಲಿ ಸಂಚರಿಸಲಿದೆ. ಅ.27 ರಂದು ಬೆಳಗ್ಗೆ 9 ಗಂಟೆಗೆ ಮುಂಡಗೋಡ ತಾಲೂಕಿಗೆ ಆಗಮಿಸಿ, ತಾಲೂಕಿನಲ್ಲಿ ಸಂಚರಿಸಲಿದೆ. ಅ.28 ರಂದು ಬೆಳಗ್ಗೆ 9 ಗಂಟೆಗೆ ಶಿರಸಿ ತಾಲೂಕಿಗೆ ಆಗಮಿಸಿ, ತಾಲೂಕಿನಲ್ಲಿ ಸಂಚರಿಸಲಿದೆ. ಅ.29 ರಂದು ರಂದು ಬೆಳಗ್ಗೆ 9 ಗಂಟೆಗೆ ಸಿದ್ದಾಪುರ ತಾಲೂಕಿಗೆ ಆಗಮಿಸಲಿದ್ದು ತಾಲೂಕಿನಲ್ಲಿ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...