ಕಾರವಾರ: ಸ್ಥಳೀಯ ಯುವ ಜನತೆಗೆ ಉದ್ಯೋಗವಕಾಶ ಸೃಷ್ಠಿಸಿ: ಡಾ. ರಮಣರೆಡ್ಡಿ

Source: S O News | By I.G. Bhatkali | Published on 16th July 2024, 6:40 PM | Coastal News |

ಕಾರವಾರ : ಉತ್ತರ ಕನ್ನಡ ಜಿಲ್ಲೆಯ  ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಠಿಸುವಂತೆ ಹಾಗೂ ಈ ಕುರಿತು ಅಗತ್ಯವಿರುವ ಕೌಶಲ್ಯ ತರಬೇತಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಕೌಶಲ್ಯ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಇ.ವಿ.ರಮಣರೆಡ್ಡಿ ತಿಳಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗಗಳನ್ನು ಒದಗಿಸಲು ಮತ್ತು ನೌಕಾ ನಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗವಕಾಶಗಳನ್ನು ಸ್ಥಳೀಯ ಯುವÀಜನತೆ ಒದಗಿಸುವ ಮೂಲಕ ಸ್ಥಳೀಯರಿಗೆ ಆರ್ಥಿಕ ಭದ್ರತೆ ಒದಗಿಸಬಹುದಾಗಿದೆ. ಪ್ರಸ್ತುತ ಈ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸಲು ಸ್ಥಳೀಯ ಯುವ ಜನತೆ ದೊರೆಯದ ಕಾರಣ ಹೊರರಾಜ್ಯದಿಂದ ಕಾರ್ಮಿಕರು ಬರುತ್ತಿದ್ದಾರೆ. ಈ ಕಾರ್ಮಿಕರಿಗೆ ಇಲ್ಲಿ ತಂಗಲು ವಸತಿ ವ್ಯವಸ್ಥೆ ಮತ್ತು ಊಟೋಪಚಾರದ ವ್ಯವಸ್ಥೆಯನ್ನೂ ಸಹ ಸಂಬAಧಪಟ್ಟ ಕಾರ್ಮಿಕ ಏಜೆನ್ಸಿಗಳು ನೋಡಿಕೊಳುತ್ತಿದ್ದು ಅವರಿಗೂ ಸಹ ಇದು ಹೆಚ್ಚಿನ ಹೊರೆಯಾಗಿದೆ ಎಂದರು.

ಆದ್ದರಿAದ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಲಭ್ಯವಿರುವ ಉದ್ಯೋಗವಕಾಶಗಳು, ಮಾನವ ಸಂಪನ್ಮೂಲದ ಬೇಡಿಕೆ ಮತ್ತು ಅದಕ್ಕೆ ಅಗತ್ಯವಿರುವ ಕೌಶಲ್ಯ ತರಬೇತಿಯ ಕುರಿತಂತೆ ಸಂಬAಧಪಟ್ಟ ಸಂಸ್ಥೆಗಳಿAದ ಮಾಹಿತಿ ಪಡೆದು, ಇಲ್ಲಿನ ಸ್ಥಳೀಯ ಯುವಜನತೆಗೆ ಕೌಶಲ್ಯ ತರಬೇತಿ ನೀಡುವುದರ ಮೂಲಕ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕೌಶಲ್ಯ ತರಬೇತಿ ಪಡೆದಿರುವ ಜಿಲ್ಲೆಯ ಸ್ಥಳೀಯ ಯುವಜನತೆಗೆ ನೌಕಾ ನೆಲೆಯಲ್ಲಿ ಅಪ್ರೆಂಟಿಸ್ ತರಬೇತಿ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಒದಗಿಸುವುದಾಗಿ ನೌಕಾ ನೆಲೆಯ ಅಧಿಕಾರಿಗಳು ತಿಳಿಸಿದರು, ಸೂಕ್ತ ತರಬೇತಿ ಪಡೆದಿರುವ ಸ್ಥಳೀಯ ಯುವ ಜನತೆಗೆ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗವಕಾಶ ನೀಡುವುದಾಗಿ ಮಾನವ ಸಂಪನ್ಮೂಲ ಒದಗಿಸುವ ಸಂಸ್ಥೆಗಳ ಅಧಿಕಾರಿಗಳು ಸಭೆಗೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು  ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯವಿರುವ ತಿಳುವಳಿಕೆ ಪತ್ರದ ಒಪ್ಪಂದ ಮಾಡಿಕೊಂಡು, ಸ್ಥಳೀಯ ಯುವಕ ಯುವತಿಯರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಾ.ಇ.ವಿ.ರಮಣರೆಡ್ಡಿ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷಿö್ಮಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀ ಬರ್ಡ್, ನೌಕಾನಲೆ, ಕೌಶಲ್ಯಾಭಿವೃದ್ದಿ, ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...