ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ;ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ

Source: SOnews | By Staff Correspondent | Published on 24th July 2024, 4:04 PM | Coastal News |

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ ಬುಧವಾರ ಆರಂಭಿಸಲಾಗಿದೆ.  ಒಂದು ವಾರದ ಹಿಂದೆ ಶಿರೂರು ಗುಡ್ಡ ಕುಸಿತ ಸಂಭವಿಸಿದ ವೇಳೆ ಮಣ್ಣಿನ ಅಡಿಯಲ್ಲಿ ಕೇರಳ ಮೂಲದ ಅರ್ಜುನ್ ಹಾಗೂ ಲಾರಿ ಹುದುಗಿ ಹೋಗಿರುವುದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪತ್ತೆ ಕಾರ್ಯ ಮಾಡಲಾಗುತ್ತಿದ್ದು, ಗುಡ್ಡ ಕುಸಿದ ಪ್ರದೇಶದಲ್ಲಿ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಬಳಿಕ ಮಣ್ಣಿನ ಸಮೇತವಾಗಿ ಅರ್ಜುನ್ ಇದ್ದ ಲಾರಿ ಗಂಗಾವಳಿ ನದಿಯಲ್ಲಿ ಮುಳುಗಡೆ ಆಗಿರಬಹುದು ಎಂದು ಶಂಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಕ್ಲೆನ್ ಯಂತ್ರ ಬಳಸಿ ಪತ್ತೆ ಕಾರ್ಯ ಆರಂಭಿಸಲಾಗಿದೆ. ಈ ಸಂದರ್ಭದಲ್ಲಿ ನೌಕಾನೆಲೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...