ಕಾರವಾರ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೊಂದಣಿ ಕೇಂದ್ರ ತೆರೆಯಿರಿ : ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ

Source: S O News | By I.G. Bhatkali | Published on 12th November 2024, 7:41 PM | Coastal News |

ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಲ್ಲಿ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡುವ ಕುರಿತಂತೆ, ನೊಂದಣಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ  ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಸರ್ಕಾರವು ಪ್ರಸಕ್ತ ಸಾಲಿಗೆ ಕನಿಷ್ಠ ಬೆಂಬಲ ಬೆಲ ಯೋಜನೆಯಡಿ ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್ ರೂ.2300 ಮತ್ತು ಗ್ರೇಡ್ ಎ ಭತ್ತಕ್ಕೆ ರೂ.2320 ಗಳನ್ನು ನಿಗಧಿಪಡಿಸಿದ್ದು, ಈ ಕುರಿತಂತೆ ಜಿಲ್ಲೆಯ ರೈತರಿಂದ ಭತ್ತ ಖರೀದಿಸಲು ಅನುಕೂಲವಾಗುವಂತೆ ಹಳಿಯಾಳ, ಶಿರಸಿ, ಮುಂಡಗೋಡು, ಜೋಯಿಡಾ, ಕುಮಟಾ, ಅಂಕೋಲಾ ಮತ್ತು ಭಟ್ಕಳದಲ್ಲಿ ನೊಂದಣಿ ಕೇಂದ್ರಗಳನ್ನು ತೆರೆದು ನ.15 ರಿಂದ ರೈತರ ನೊಂದಣಿಯನ್ನು ಆರಂಭಿಸುವAತೆ ಸೂಚಿಸಿದರು. 

ಭತ್ತ ಖರೀದಿಗೆ ಸಂಬAಧಿಸಿದAತೆ ಸರ್ಕಾರದಿಂದ ನೇಮಕಗೊಂಡ ಸಂಗ್ರಹಣಾ ಏಜೆನ್ಸಿಗಳು ಸರ್ಕಾರ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಭತ್ತ ಖರೀದಿ ಹಂತದಲ್ಲಿ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು, ಪ್ರತೀ ಖರೀದಿ ಕೇಂದ್ರದಲ್ಲಿ ಕೃಷಿ ಇಲಾಖೆಯ ವತಿಯಿಂದ ಗ್ರೇಡರ್‌ಗಳನ್ನು ನೇಮಿಸಿಕೊಳ್ಳಬೇಕು ಎಂದರು.

ಪ್ರತೀ ಖರೀದಿ ಕೇಂದ್ರಗಳಿಗೆ ಖರೀದಿ ಅಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ರೈತರಿಂದ ಖರೀದಿಸಿದ ಭತ್ತ ಸಂಗ್ರಹಣೆಗೆ ಗೋದಾಮುಗಳ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಮತ್ತು ಖರೀದಿ ಕೇಂದ್ರಗಳಿಗೆ ಆಗಮಿಸುವ ರೈತರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು.

ಭತ್ತವನ್ನು ಸರಬರಾಜು ಮಾಡಿದ ರೈತರಿಗೆ 15 ದಿನಗಳ ಒಳಗೆ ಅವರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಬೇಕು. ಜಿಲ್ಲೆಯಲ್ಲಿ ಸಂಗ್ರಹವಾದ ಭತ್ತವನ್ನು ಹಲ್ಲಿಂಗ್ ಮಾಡುವ ಕುರಿತಂತೆ ಅಕ್ಕಿ ಗಿರಣಿಗಳನ್ನು ನೊಂದಾವಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಭತ್ತಕ್ಕೆ ನಿಗಧಿಪಡಿಸಿರುವ ಕನಿಷ್ಠ ಬೆಂಬಲ ಬೆಲೆ, ಭತ್ತ ಖರೀದಿಗಾಗಿ ರೈತರಿಗಾಗಿ ಜಿಲ್ಲೆಯಲ್ಲಿ ತೆರೆಯಲಾಗುವ ನೊಂದಣಿ ಕೇಂದ್ರಗಳು ಮತ್ತು ಖರೀದಿ ಕೇಂದ್ರಗಳ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಅಗತ್ಯ ಮಾಹಿತಿಯನ್ನು ತಲುಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣ್‌ಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವ ಪ್ರಸಾದ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಗಿರಣಿ ಮಾಲೀಕರು ಉಪಸ್ಥಿತರಿದ್ದರು.

For report in English, Click here

Read These Next

ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಮರಳು ಸಮಸ್ಯೆ ಶಾಶ್ವತ ಪರಿಹಾರವನ್ನು ಕೊಡಲು ಕಾರ್ಮಿಕರ ಒಕ್ಕೂಟದ ಆಗ್ರಹ

ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಮೂಲ ವಸ್ತುವಾಗಿ ಅತೀ ಮುಖ್ಯ ಪಾತ್ರವಹಿಸಿದೆ. ಆದರೆ, ಸರಕಾರ ಮತ್ತು ಸ್ಥಳೀಯಾಡಳಿತದ ಅವೈಜ್ಞಾನಿಕ ...

ಕಾರವಾರ: ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ : ಎಸ್.ಕೆ. ವಂಟಿಗೋಡಿ

ವಿದ್ಯಾಭ್ಯಾಸಕ್ಕಾಗಿ ತಮ್ಮ ಪೋಷಕರನ್ನು ಬಿಟ್ಟು ಬಂದು ಹಾಸ್ಟೆಲ್ ಗಳಲ್ಲಿ ನೆಲೆಸಿ, ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ...

ಕಾರವಾರ: ಜೈಲಿನ ಕಿಟಕಿಗಳಿಗೆ ಮೇಶ್ ಹಾಕಿಸಿ, ಗೋಡೆಗಳಿಗೆ ಪೈಂಟ್ ಮಾಡಿಸಿ : ಎಸ್.ಕೆ. ವಂತಿಕೋಡಿ

ಕಾರವಾರ ಜಿಲ್ಲಾ ಕಾರಾಗೃಹದ ನಿವಾಸಿಗಳಿಗೆ ಸೊಳ್ಳೆ ಕಡಿತವಾಗದಂತೆ ತಡೆಯಲು ಜೈಲಿನ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಶ್ ಹಾಕಿಸಿ ...