ಕಾರವಾರ: ಜೈಲಿನ ಕಿಟಕಿಗಳಿಗೆ ಮೇಶ್ ಹಾಕಿಸಿ, ಗೋಡೆಗಳಿಗೆ ಪೈಂಟ್ ಮಾಡಿಸಿ : ಎಸ್.ಕೆ. ವಂತಿಕೋಡಿ

Source: S O News | By MV Bhatkal | Published on 12th November 2024, 7:27 PM | Coastal News |

ಕಾರವಾರ:- ಕಾರವಾರ ಜಿಲ್ಲಾ ಕಾರಾಗೃಹದ ನಿವಾಸಿಗಳಿಗೆ ಸೊಳ್ಳೆ ಕಡಿತವಾಗದಂತೆ ತಡೆಯಲು ಜೈಲಿನ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಶ್ ಹಾಕಿಸಿ ಹಾಗೂ ಗೋಡೆಗಳಿಗೆ ಹೊಸದಾಗಿ ಪೈಂಟ್ ಮಾಡಿಸುವಂತೆ ಕಾರಾಗೃಹ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಮಾನವ ಹಕ್ಕು ಆಯೋಗದ ನ್ಯಾಯಾಂಗ ಸದಸ್ಯರಾದ ಎಸ್.ಕೆ. ವಂತಿಕೋಡಿ ಸೂಚನೆ ನೀಡಿದರು.

ಅವರು ಸೋಮವಾರ ಕಾರವಾರದ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರಾಗೃಹವಾಸಿಗಳು ಜೈಲಿನಲ್ಲಿ ಸೊಳ್ಳೆಯ ಸಮಸ್ಯೆಯ ಬಗ್ಗೆ ತಿಳಿಸಿದರು, ಈ ಕುರಿತಂತೆ ಜೈಲು ಕೊಠಡಿಯ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಸ್ ಅಳವಡಿಸುವಂತೆ ಸೂಚಿಸಿದ ಅವರು ಜೈಲಿನ ಗೋಡೆಗಳಿಗೆ ಪೈಂಟ್ ಮಾಡಿ ಹಲವು ವರ್ಷಗಳು ಕಳೆದಿರುವುದನ್ನು ಕಂಡು ಉತ್ತಮ ಗುಣಮಟ್ಟದ ಪೈಂಟ್ ಮಾಡಿಸುವಂತೆ ಹಾಗೂ ಕಾರಾಗೃಹದ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಮತ್ತು ವೈದ್ಯರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದರು.

ಕಾರಾಗೃಹದ ಅಡುಗೆ ಮನೆಗೆ ಭೇಟಿ ನೀಡಿ, ಸ್ವತ: ಆಹಾರ ಸೇವಿಸಿ, ಯಾವುದೇ ಕಾರಣಕ್ಕೂ ಆಹಾರದ ಗುಣಮಟ್ಟದಲ್ಲಿ ಕೊರತೆ ಕಂಡುಬಾರದAತೆ ಎಚ್ಚರಿಕೆ ವಹಿಸುವಂತೆ ಹಾಗೂ ತಾಜಾ ಮತ್ತು ಗುಣಮಟ್ಟದ ಕಾಳುಗಳು ಮತ್ತು ತರಕಾರಿಗಳನ್ನು ಬಳಕೆ ಮಾಡುವಂತೆ ಹಾಗೂ ಕೊಠಡಿಗಳು ಮತ್ತು ಶೌಚಾಲಯಗಳಲ್ಲಿ ಪ್ರತಿನಿತ್ಯ ಸ್ವಚ್ಛತೆ ಕಾಪಾಡುವಂತೆ ನಿರ್ದೇಶನ ನೀಡಿದರು.


ಕಾರಾಗೃಹವಾಸಿಗಳೊಂದಿಗೆ ಮಾತನಾಡಿದ ಅವರು ಜೈಲಿನಲ್ಲಿ ಏನಾದರೂ ಸಮಸ್ಯೆಗಳಿವೆಯೇ, ಊಟ ಸರಿಯಿದೆಯೇ , ಮೂಲಭೂತ ಸೌಲಭ್ಯಗಳು ಸರಿಯಿವೆಯೇ , ಎಲ್ಲಾರನ್ನು ವಿಚಾರಣೆಗೆ ಕೋರ್ಟ್ ಗೆ ಹಾಜರು ಪಡಿಸುತ್ತಿದ್ದಾರೆಯೇ, ವಿಸಿ ಮೂಲಕ ವಿಚಾರಣೆ ನಡೆಯುತ್ತಿದೆಯೇ , ವಕೀಲರ ನೇಮಕ ಆಗಿದೆಯೇ ಎಂದು ವಿಚಾರಿಸಿದರು. ಈ ಕುರಿತಂತೆ ಯಾವುದೇ ಸಮಸ್ಯೆ ಇಲ್ಲವೆಂದು ಕಾರಾಗೃಹವಾಸಿಗಳು ತಿಳಿಸಿದರು.
ಜೈಲಿನಲ್ಲಿ ಅಳವಡಿಸಿರುವ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದರು.


ಬೆಳಗಾವಿ ಕಾರಾಗೃಹದ ಸಹಾಯಕ ಅಧೀಕ್ಷಕ ಕೃಷ್ಣಮೂರ್ತಿ, ಕಾರವಾರ ಕಾರಾಗೃಹದ ಪ್ರಭಾರ ಅಧೀಕ್ಷಕ ಫಕೀರಪ್ಪ ತಮ್ಮಣ್ಣ ದಾಂಡೇನವರ್, ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಮೇಶ್ ಹೂಗಾರ್ ಉಪಸ್ಥಿತರಿದ್ದರು. ನಂತರ ಕಾರವಾರ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read These Next

ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಮರಳು ಸಮಸ್ಯೆ ಶಾಶ್ವತ ಪರಿಹಾರವನ್ನು ಕೊಡಲು ಕಾರ್ಮಿಕರ ಒಕ್ಕೂಟದ ಆಗ್ರಹ

ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಮೂಲ ವಸ್ತುವಾಗಿ ಅತೀ ಮುಖ್ಯ ಪಾತ್ರವಹಿಸಿದೆ. ಆದರೆ, ಸರಕಾರ ಮತ್ತು ಸ್ಥಳೀಯಾಡಳಿತದ ಅವೈಜ್ಞಾನಿಕ ...

ಕಾರವಾರ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೊಂದಣಿ ಕೇಂದ್ರ ತೆರೆಯಿರಿ : ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ

ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಲ್ಲಿ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡುವ ಕುರಿತಂತೆ, ನೊಂದಣಿ ...

ಕಾರವಾರ: ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ : ಎಸ್.ಕೆ. ವಂಟಿಗೋಡಿ

ವಿದ್ಯಾಭ್ಯಾಸಕ್ಕಾಗಿ ತಮ್ಮ ಪೋಷಕರನ್ನು ಬಿಟ್ಟು ಬಂದು ಹಾಸ್ಟೆಲ್ ಗಳಲ್ಲಿ ನೆಲೆಸಿ, ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ...