ಭಟ್ಕಳ: ಆತ್ಮಹತ್ಯೆ ಶರಣಾದ ತಾಯಿ ಮಗಳು: ಭಟ್ಕಳದಲ್ಲಿ ನಡೆದ ದಾರುಣ ಘಟನೆ

Source: S O News | By MV Bhatkal | Published on 16th July 2024, 3:13 PM | Coastal News | Don't Miss |

ಭಟ್ಕಳ: ಮನೆಯಲ್ಲಿ ಯಾರು ಇರದ ಸಮಯದಲ್ಲಿ ಮಹಿಳೆಯೊರ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಇದನ್ನು ನೋಡಿದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಲ್ವಡಿಕವೂರ ಪಂಚಾಯಿತಿ ವ್ಯಾಪ್ತಿಯ ಸರ್ಪನಕಟ್ಟೆಯಲ್ಲಿ ಸೋಮವಾರ ನಡೆದಿದೆ.

ತಾಲೂಕಿನ ಯಲ್ವಡಿಕವೂರ ಪಂಚಾಯಿತಿಯ ಸರ್ಪನಕಟ್ಟೆ ಗೋರಿಕಲ್ ಮನೆಯ ಕೃಷ್ಣಮ್ಮ ನಾರಾಯಣ ನಾಯ್ಕ(೫೫) ಹಾಗೂ ಇವರ ಪುತ್ರಿ ಮಾದೇವಿ ದೊಡ್ಡಯ್ಯ ನಾಯ್ಯ(೩೭) ಆತ್ಮಹತ್ಯೆ ಮಾಡಿಕೊಂಡವರು. ಮನಯೆಲ್ಲಿ ಸೋಮವಾರ ಎಲ್ಲರೂ ಮದುವೆ ಸಮಾರಂಭಕ್ಕೆ ತೆರಳಿದಾಗ ಮೊದಲು ಮೊದೇವಿ ದೊಡ್ಡಯ್ಯ ನಾಯ್ಕ (ಮಗಳು) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಳಿಕ ಇದು ಮನೆಯ ಸದಸ್ಯರ ಗಮನಕ್ಕೆ ಬರುತ್ತಿರುವಂತೆ ಇದನ್ನು ಕಂಡ ತಾಯಿ  ಕೃಷ್ಣಮ್ಮ ಕೂಡ ತನ್ನ ಮನೆಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗಳು ಮಾದೇವಿ ಮದುವೆಯಾಗಿ ೧೪ ವರ್ಷ ಆಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ೧೨ವರ್ಷಗಳಿಂದ ತನ್ನ ತಾಯಿಯ ಮನೆಯಲ್ಲಿ ಬೇರೆಯಾಗಿಯೆ ವಾಸವಿದ್ದಳು. ಭಾನುವಾರ ತಾಯಿ ಮಗಳ ನಡುವೆ ಯಾವುದೊ ವಿಷಯಕ್ಕೆ ಕಲಹ ಉಂಟಾಗಿದೆ ಈ ಹಿನ್ನಲೆಯಲ್ಲಿ ಮಗಳು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಾದೇವಿ ಡೆತ್ ನೋಟ್ ಬರೆದಿಟ್ಟಿದ್ದು ತನ್ನ ಸಾವಿಗೆ ಯಾರು ಕಾರಣರಲ್ಲ. ಆದರೆ ತನ್ನ ಶವವನ್ನು ತಾಯಿ ಮತ್ತು ಸಹೋದರ ನೋಡಬಾರದು ಎಂದು ಬರೆದಿದ್ದಳು. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿ.ಐ ಚಂದನ ಗೋಪಾಲ ತೆರಳಿ ತನಿಖೆ ಕೈಗೊಂಡಿದ್ದಾರೆ.

Read These Next

ಕರಾಟೆ ಪಟು ದಿ.ಕಾಶಿಫ್ ಸ್ಮರಣಾರ್ಥ; ಅ.20 ರಂದು ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿಯಿಂದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

ಭಟ್ಕಳ: ಆಝಾದ್ ನಗರದ ಅಮರಶಾ ಕರಾಟೆ ಮತ್ತು ಫಿಟ್ನೆಸ್ ಅಕಾಡೆಮಿ (AKFA), ಸಂಸ್ಥೆಯು ಕರಾಟೆ ಪಟು ದಿ.ಕಾಶಿಫ್ ರುಕ್ನುದ್ದೀನ ಸ್ಮರಣಾರ್ಥ ಅ.20 ...

16 ವರ್ಷದ ಮಕ್ಕಳಲ್ಲಿ ಪ್ರತಿರಕ್ಷಣಾತ್ಮಕ ಶಕ್ತಿ ವೃದ್ಧಿಸಲು ಭಟ್ಕಳದಲ್ಲಿ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ

ಭಟ್ಕಳ: ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಮಹತ್ವದ ಪ್ರಯತ್ನದಲ್ಲಿ, ಸ್ಥಳೀಯ ಆರೋಗ್ಯ ಅಧಿಕಾರಿಗಳು ಭಟ್ಕಳದ ...

ಕಾರವಾರ: ಫೇಶಿಯಲ್ ರೆಕಗ್ನೇಶನ್ ಹಾಜರಾತಿ ರಾಜ್ಯಾದ್ಯಂತ ಜಾರಿಗೆ ಚಿಂತನೆ ; ರಿತೇಶ್ ಕುಮಾರ್ ಸಿಂಗ್

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಮೊಬೈಲ್‌ನಲ್ಲಿ ಫೇಶಿಯಲ್ ರೆಕಗ್ನೇಶನ್ ಮೂಲಕ ...

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...