ದುಬೈ: ಇಂದು ನಡೆದ ಐಪಿಎಲ್ 2020 ಮೊದಲ ಕ್ವಾಲಿಫೈಯರ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳಿಂದ ಮಣಿಸಿದ್ದು, 6ನೇ ಬಾರಿಸಿ ಫೈನಲ್ ಪ್ರವೇಶಿಸಿದೆ.
ಗೆಲುವಿಗೆ 201 ರನ್ ಗಳ ಬೃಹತ್ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ 143/8 ರನ್ ಗಳಿಸಷ್ಟೇ ಶಕ್ತವಾಯಿತು. ಸ್ಟೋನಿಸ್ 65, ಅಕ್ಸರ್ ಪಟೇಲ್ 42 ರನ್ ಬಾರಿಸಿದರು.
ಮುಂಬೈ ಪರ ಬುಮ್ರಾ 4 ಹಾಗೂ ಬೌಲ್ಟ್ 2 ವಿಕೆಟ್ ಪಡೆದರು.
ಇದಕ್ಕೂ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳಿಸಿತು.
ನಾಯಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿ ನಿರಾಶೆ ಮೂಡಿಸಿದರು. ಆರಂಭಿಕ ಆಟಗಾರ ಡಿಕಾಕ್ 25 ಎಸೆತಗಳಲ್ಲಿ 40 ರನ್ ಹಾಗೂ ಸೂರ್ಯಕುಮಾರ್ ಯಾದವ್ 51 (38 ಎಸೆತ) ರನ್ ಸಿಡಿಸಿದರು. ಇಶಾನ್ ಕಿಶಾನ್ 55( 30 ಎಸೆತ) ಹಾಗೂ ಹಾರ್ದಿಕ್ ಪಾಂಡ್ಯ 37 (14 ಎಸೆತ) ರನ್ ಗಳಿಸಿ ತಂಡವನ್ನು ಆಧರಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಆರ್.ಆಶ್ವಿನ್ 3, ನೋರ್ಟ್ಜೆ ಹಾಗೂ ಸ್ಟೋನಿಸ್ ತಲಾ 1 ವಿಕೆಟ್ ಪಡೆದರು.
ನಾಲ್ಕು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿ 14 ಪಂದ್ಯಗಳ ಪೈಕಿ ಒಂಬತ್ತರಲ್ಲಿ ಜಯ ಗಳಿಸಿ ಪ್ಲೇ ಆಫ್‌ಗೆ ಅರ್ಹತೆ ಗಳಿಸಿದೆ. ಡೆಲ್ಲಿ ಎಂಟು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿತ್ತು. ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುಂಬೈ ಫೈನಲ್ ಪ್ರವೇಶಿಸಿದರೆ, ಡೆಲ್ಲಿ ತಂಡ ಕ್ವಾಲಿಫೈಯರ್2 ರಲ್ಲಿ ಆಡಲಿದೆ.