ಮುರುಡೇಶ್ವರ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ತಾಲೂಕಾಡಳಿತ

Source: SOnews | By Staff Correspondent | Published on 15th June 2023, 3:59 PM | Coastal News | Don't Miss |

ಭಟ್ಕಳ: ಭೈಫರ್ ಜೋಯರ ಚಂಡ ಮಾರುತ ಹಿನ್ನೆಯಲ್ಲಿ  ಅರಬ್ಬಿ ಸಮುದ್ರದಲ್ಲಿ ಭಾರಿ ಅಲೆಗಳು ಏಳುತ್ತಿದ್ದು ಸಮುದ್ರ ಪ್ರಕ್ಷುಬ್ಧಗೊಂಡಿದೆ. ಈ ಹಿನ್ನೆಲೆಯಲ್ಲಿ ಮುರುಡೇಶ್ವರದ ಸಮುದ್ರದಲ್ಲಿ ಪ್ರವಾಸಿಗರು ಇಳಿಯದಂತೆ ಎಚ್ಚರಿಕೆಯ ಸಂದೇಶವನ್ನು ನೀಡಿರುವ ಭಟ್ಕಳ ಸಹಾಯಕ ಅಯುಕ್ತೆ ಮಮತಾದೇವಿ ಜಿ.ಎಸ್. ಗುರವಾರದಿಂದ ಆ.೧೫ ಅಥವಾ ಮಳೆಗಾಲ ಮುಗಿಯುವ ವರೆಗೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.

ಚಂಡಮಾರುತದ ಆಗಮನದ ಹಿನ್ನೆಲೆಯಲ್ಲಿ ಸಮುದ್ರದ ಏರಿಳಿತ ಮತ್ತು ಬಲವಾದ ಅಲೆಗಳಿಂದ ಮಾನವ ಜೀವಕ್ಕೆ ಅಪಾಯದ ಹಿನ್ನೆಲೆಯಲ್ಲಿ ಪ್ರವಾಸಿಗರು ಸಮುದ್ರ ಪ್ರವೇಶಿಸದಂತೆ ಎಚ್ಚರಿಕೆ ಕ್ರಮಗಳನ್ನು ಜರಗಿಸಲಾಗಿದೆ ಎಂದು ತಿಳಿದುಬಂದಿದೆ.  

ಮುರ್ಡೇಶ್ವರನ ದರುಶನಕ್ಕೆಂದು ಬರುವ ಹೆಚ್ಚಿನ ಪ್ರವಾಸಿಗರು ಕಡಲ ಅಲೆಗಳೊಂದಿಗೆ ಆಟವಾಡಲು ಸಮುದ್ರಕ್ಕಿಳಿಯುತ್ತಾರೆ. ಇದರಿಂದಾಗಿ ಕಳೆದ ಮೂರು ದಿನಗಳ ಅಂತರದಲ್ಲಿ ಇಬ್ಬರು ಪ್ರವಾಸಿಗರು ಜೀವ ತೆತ್ತಿದ್ದಾರೆ. ಅಲ್ಲದೆ ಕಳೆದ ಒಂದು ತಿಂಗಳಲ್ಲಿ ಸುಮಾರು ೨೫ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.  ಕೇವಲ ಮಳೆಗಾಲದಲ್ಲಷ್ಟೇ ಅಲ್ಲದೆ ಸಾಮಾನ್ಯ ದಿನಗಳಲ್ಲಿಯೂ ಇಂತಹ ಅವಘಡಗಳು ಮುರುಡೇಶ್ವರದಲ್ಲಿ ನಡೆಯುತ್ತಲೆ ಇರುತ್ತವೆ. ಆದರೆ ಮಳೆಗಾಲದಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ.

ಪ್ರವಾಸಿಗರ ಸುರಕ್ಷತೆಗಾಗಿ ಕಡಲತೀರದಲ್ಲಿ ಕರಾವಳಿ ಕಾವಲು ಪಡೆಗಳನ್ನು ನಿಯೋಜಿಸಲಾಗಿದ್ದು, ಪ್ರವಾಸಿಗರಿಗೆ ಅಪಾಯದ ಬಗ್ಗೆ ಮಾಹಿತಿ ನೀಡುವ ಮತ್ತು ಸಮುದ್ರದ ಉಂಟಾಗುವ ಅನಾಹುತಗಳನ್ನು ತಡೆಯುವ ಹೊಣೆಗಾರಿಕೆ ಇದೆ. ಭಟ್ಕಳ ತಾಲೂಕಾಡಳಿತವು ಪ್ರವಾಸಿಗರಿಗೆ ಸಮುದ್ರದಲ್ಲಿ ಮುಳುಗುವ ಅಪಾಯದ ಕುರಿತು ಎಚ್ಚರಿಕೆಯ ಕ್ರಮಗಳನ್ನು ಜರುಗಿಸಿದ್ದು ಪ್ರವಾಸಿಗರಲ್ಲಿ ಪೋಸ್ಟರ್‌ಗಳ ಮೂಲಕ ಜಾಗೃತಿಯನ್ನು ಮೂಡಿಸುತ್ತಿದೆ. ಅಲ್ಲದೆ, ಸ್ಥಳೀಯ ಮೀನುಗಾರರು ಮತ್ತು ಪೊಲೀಸ್ ಅಧಿಕಾರಿಗಳು ಸಹ ಪ್ರವಾಸಿಗರು ಸಮುದ್ರಕ್ಕೆ ಪ್ರವೇಶಿಸುವುದನ್ನು ತಡೆಯಲು ಪ್ರಯತ್ನಿಸುತ್ತಾರೆ. ಆದರೆ ಸಮುದ್ರದ ಅಲೆಗಳನ್ನು ನೋಡಿದ ಪ್ರವಾಸಿಗರು ಯಾರ ಮಾತನ್ನೂ ಕೇಳಲು ಒಪ್ಪುವುದಿಲ್ಲ ಮತ್ತು ಮೋಜಿಗಾಗಿ ಸಮುದ್ರದಲ್ಲಿ ಇಳಿಯುತ್ತಾರೆ. ಇದರಿಂದಾಗಿ ಆಗಾಗ ಮಾರಾಣಾಂತಿಕ ಘಟನೆಗಳನ್ನು ಮುರುಡೇಶ್ವರದಲ್ಲಿ ವರದಿಯಾಗುತ್ತಲೆ ಇವೆ

ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಭಟ್ಕಳ ಸಹಾಯಕ ಆಯುಕ್ತರಿಗೆ ಮುರ್ಡೇಶ್ವರ ಕಡಲತೀರದಲ್ಲಿ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ನೀರು ನುಗ್ಗದಂತೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.  ಈ ಕುರಿತು ಕಾರ್ಯಪ್ರವೃತ್ತರಾದ ಸಹಾಯಕ ಆಯುಕ್ತರು ಬೀಚ್‌ಗೆ ಹೋಗುವ ರಸ್ತೆಯಲ್ಲಿ ಬ್ಯಾರಿಕೇಡ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಿದ್ದು, ಆಗಸ್ಟ್ ಅಂತ್ಯದವರೆಗೆ ಅಥವಾ ಮಳೆಗಾಲದ ಅಂತ್ಯದವರೆಗೆ ಯಾರೂ ಸಮುದ್ರಕ್ಕೆ ಇಳಿಯದಂತೆ ಆದೇಶಿಸಿದ್ದಾರೆ. ಮತ್ತು ಯಾರಾದರೂ ಈ ಆದೇಶವನ್ನು ಉಲ್ಲಂಘಿಸಿದರೆ, ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಸುವುದಾಗಿಯೂ ಎಚ್ಚರಿಕೆಯನ್ನು ನೀಡಿದ್ದಾರೆ. 

Read These Next

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್, ಇತರ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್

ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಮರಳು ಸಮಸ್ಯೆ ಶಾಶ್ವತ ಪರಿಹಾರವನ್ನು ಕೊಡಲು ಕಾರ್ಮಿಕರ ಒಕ್ಕೂಟದ ಆಗ್ರಹ

ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಮೂಲ ವಸ್ತುವಾಗಿ ಅತೀ ಮುಖ್ಯ ಪಾತ್ರವಹಿಸಿದೆ. ಆದರೆ, ಸರಕಾರ ಮತ್ತು ಸ್ಥಳೀಯಾಡಳಿತದ ಅವೈಜ್ಞಾನಿಕ ...

ಕಾರವಾರ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೊಂದಣಿ ಕೇಂದ್ರ ತೆರೆಯಿರಿ : ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ

ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಲ್ಲಿ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡುವ ಕುರಿತಂತೆ, ನೊಂದಣಿ ...

ಕಾರವಾರ: ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ : ಎಸ್.ಕೆ. ವಂಟಿಗೋಡಿ

ವಿದ್ಯಾಭ್ಯಾಸಕ್ಕಾಗಿ ತಮ್ಮ ಪೋಷಕರನ್ನು ಬಿಟ್ಟು ಬಂದು ಹಾಸ್ಟೆಲ್ ಗಳಲ್ಲಿ ನೆಲೆಸಿ, ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ...

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್, ಇತರ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್

ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಭಟ್ಕಳ: ದೀಪಾವಳಿ ಟ್ರೋಪಿ 2024-25 ರ ತಾಲೂಕಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಚಾಲನೆ

ಭಟ್ಕಳ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದೀಪಾವಳಿ ಟ್ರೋಪಿ 2024-25 ರ ತಾಲೂಕಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ...