ಮೈಸೂರು ದಸರಾ 2024: ಅ.3-11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​, ಅ.12ಕ್ಕೆ ಜಂಬೂ ಸವಾರಿ

Source: S O News | By MV Bhatkal | Published on 29th September 2024, 1:46 PM | State News |

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಮಂಡಳಿಯು ಬಿಡುಗಡೆ ಮಾಡಿದೆ.

ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದು, ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ.

ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ. ಸಂಜೆ 7ಕ್ಕೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ಪಂಜಿನ ಕವಾಯತ್​ ಅನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

ಈ ಬಾರಿ ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿದ್ದು, ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡುತ್ತವೆ. ಖಾಸಗಿ ವಾಹನದಲ್ಲಿ ಹೋಗುವವರಿಗೆ ಕಾರ್ಯಕ್ರಮ ನಡೆಯವ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಇದೆ. ಇನ್ನು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ದಸರಾ 2024ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಗಳಿಗೆ ಭೇಟಿ ನೀಡಬಹುದಾಗಿದೆ.

Read These Next

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...

ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಗಿಟ್ಟಿಸಿದ್ದ ಮುನಿರತ್ನ; ರಕ್ಷಣೆ ನೀಡಿದರೆ 'ಸಿಟ್' ಮುಂದೆ ದಾಖಲೆ ಬಿಡುಗಡೆ: ಸಂತ್ರಸ್ತೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿಸಿ, ಅವರನ್ನು ...

ಚಿಕ್ಕಮಗಳೂರು: ಓವರ್‌ಡೋಸ್ ಇಂಜೆಕ್ಷನ್‌ನಿಂದ ಏಳು ವರ್ಷದ ಬಾಲಕನ ದುರ್ಮರಣ; ಸಾರ್ವಜನಿಕರಿಂದ ಆಕ್ರೋಶ

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್‌ನ ...

ಚುನಾವಣಾ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಸುಲಿಗೆ ಆರೋಪ; ಕೇಂದ್ರ ಸಚಿವೆ ನಿರ್ಮಲಾ ವಿರುದ್ಧ ಎಫ್‌ಐಆರ್

ಚುನಾವಣಾ ಬಾಂಡ್ ಮೂಲಕ ಕಾರ್ಪೊರೇಟ್ ಕಂಪೆನಿಗಳಿಂದ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ...