ಭಟ್ಕಳ: ಉತ್ತರ ಕನ್ನಡ, ದ. ಕ. ಹಾಗೂ ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.
ದ.ಕ. ಜಿಲ್ಲೆಯ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲೆ, ಪಿಯು,ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಅತ್ಯಧಿಕ ಮಳೆಯ ಸಾಧ್ಯತೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜು.25ರಂದು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಸೇರಿದಂತೆ ಎಲ್ಲ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳು ಜಲಾವೃತ ಗೊಂಡಿದ್ದು, ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ. ಮುಂಜಾಗೃತಾ ಕ್ರಮವಾಗಿ ಜು.25 ರಂದು ಕೂಡ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.