ಚಂಡೀಗಢ: ಒಂದು ತಿಂಗಳ ಕಾಲ ಕೊರೋನಾ ವಿರುದ್ಧದ ಹೋರಾಟ ನಡೆಸಿದ್ದ ಮಿಲ್ಖಾ ಸಿಂಗ್ (91) ಜೂ.19 ನಿಧನರಾಗಿದ್ದಾರೆ.
ಈ ಮಾಹಿತಿಯನ್ನು ಕುಟುಂಬದ ವಕ್ತಾರರು ದೃಢಪಡಿಸಿದ್ದಾರೆ. ಜೂ.14 ರಂದು ಮಿಲ್ಖಾ ಸಿಂಗ್ ಪತ್ನಿ, ಭಾರತ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್ ಕೊರೋನಾದಿಂದ ಸಾವನ್ನಪ್ಪಿದ್ದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಿಲ್ಖಾ ಸಿಂಗ್ (91) ಗಾಲ್ಫರ್ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕೊರೊನಾದಿಂದ ತೀವ್ರವಾಗಿ ಅನಾರೋಗ್ಯ ಎದುರಿಸಿದ್ದ ಮಿಲ್ಖಾ ಸಿಂಗ್ ಚೇತರಿಸಿಕೊಂಡು ಜೂ.16 ರಂದು ಐಸಿಯುನಿಂದ ಹೊರ ಬಂದಿದ್ದರು. ಆದರೆ ಜೂ.18 ರಂದು ರಾತ್ರಿ 11:30 ರ ವೇಳೆಗೆ ಮೃತಪಟ್ಟಿದ್ದಾರೆ.
ಏಕಾ ಏಕಿ ಜ್ವರ ಮತ್ತು ಆಕ್ಸಿಜನ್ ಪ್ರಮಾಣ ಕುಸಿತ ಕಂಡ ಪರಿಣಾಮ ಮಿಲ್ಖಾ ಸಿಂಗ್ ಸಾವನ್ನಪ್ಪಿದ್ದಾರೆ. ಕಳೆದ ತಿಂಗಳು ಕೊರೋನಾ ಸೋಂಕಿಗೆ ಗುರಿಯಾಗಿದ್ದ ಮಿಲ್ಖಾ ಸಿಂಗ್ ಜೂ.16 ರಂದು ಕೊರೋನಾ ಸೋಂಕು ಪತ್ತೆ ಪರೀಕ್ಷೆ ನೆಗೆಟೀವ್ ಬಂದಿತ್ತು. ಗುರುವಾರದಂದು ಸಂಜೆ ಮಿಲ್ಖಾ ಸಿಂಗ್ ಅವರ ಆರೋಗ್ಯ ಸ್ಥಿರವಾಗಿತ್ತು.
ಮಿಲ್ಖಾ ಸಿಂಗ್ ನಾಲ್ಕು ಬಾರಿ ಏಷ್ಯನ್ಸ್ ಗೇಮ್ಸ್ ನಲ್ಲಿ ಚಿನ್ನದ ಪದಕದ ವಿಜೇತರಾಗಿದ್ದು, 1958 ರ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. 1960 ರ ರೋಮ್ ಒಲಂಪಿಕ್ಸ್ ನಲ್ಲಿ 400 ಮೀಟರ್ ಫೈನಲ್ ನಲ್ಲಿ ನಾಲ್ಕನೇ ಸ್ಥಾನ ಗೆದ್ದಿದ್ದು ಮಿಲ್ಖಾ ಅವರ ಅತ್ಯುತ್ತಮ ಸಾಧನೆಯಾಗಿದೆ. 1956 ಹಾಗೂ 1964 ರ ಒಲಂಪಿಕ್ಸ್ ನಲ್ಲಿ ಮಿಲ್ಖಾ ಸಿಂಗ್ ಭಾರತವನ್ನು ಪ್ರತಿನಿಧಿಸಿದ್ದರು.
ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ಸಂತಾಪ
ಖ್ಯಾತ ಓಟಗಾರ ಮಿಲ್ಖಾ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಿಲ್ಖಾ ಸಿಂಗ್ ಅವರನ್ನು ಅಸಾಧಾರಣ ಕ್ರೀಡಾಪಟು ಎಂದು ಮೋದಿ ಹೇಳಿದ್ದಾರೆ.
ಸರಣಿ ಟ್ವೀಟ್ ಮಾಡಿದ ಮೋದಿ, "ಮಿಲ್ಖಾ ಸಿಂಗ್ ಒಬ್ಬ ಮಹಾನ್ ಕ್ರೀಡಾಪಟು, ಅವರನ್ನು ನಾವು ಕಳೆದುಕೊಂಡಿದ್ದೇವೆ. ಅಸಂಖ್ಯಾತ ಭಾರತೀಯರ ಹೃದಯದಲ್ಲಿ ಅವರಿಗೆ ವಿಶೇಷ ಸ್ಥಾನವಿದೆ. ಅವರ ವ್ಯಕ್ತಿತ್ವವು ಲಕ್ಷಾಂತರ ಭಾರತೀಯರಿಗೆ ಸ್ಫೂರ್ತಿ ನೀಡುತ್ತದೆ" ಎಂದು ತಿಳಿಸಿದ್ದಾರೆ.
"ನಾನು ಕೆಲವು ದಿನಗಳ ಹಿಂದೆ ಮಿಲ್ಖಾ ಸಿಂಗ್ ಅವರೊಂದಿಗೆ ಮಾತನಾಡಿದ್ದೇನೆ. ಇದು ನಮ್ಮ ಕೊನೆಯ ಸಂಭಾಷಣೆ ಎಂದು ನನಗೆ ತಿಳಿದಿರಲಿಲ್ಲ. ಅವರ ಜೀವನವು ಅನೇಕ ಉದಯೋನ್ಮುಖ ಕ್ರೀಡಾಪಟುಗಳಿಗೆ ಬಲವನ್ನು ನೀಡುತ್ತದೆ. ಅವರ ಕುಟುಂಬ ಮತ್ತು ವಿಶ್ವದಾದ್ಯಂತದ ಅಭಿಮಾನಿಗಳಿಗೆ ನನ್ನ ಸಂತಾಪ" ಎಂದು ಹೇಳಿದ್ದಾರೆ.
Read These Next
ಗುತ್ತಿಗೆ ಪಡೆಯಲು 2,240 ಕೋಟಿ ರೂ. ಲಂಚ; ಅದಾನಿ ವಿರುದ್ಧ ಅಮೆರಿಕ ಬಂಧನ ವಾರಂಟ್
ಸೌರ ವಿದ್ಯುತ್ ಖರೀದಿ ಒಪ್ಪಂದಗಳನ್ನು ಏರ್ಪಡಿಸಲು ಭಾರತದಲ್ಲಿ ಸರಕಾರಿ ಅಧಿಕಾರಿಗಳಿಗೆ 265 ಮಿಲಿಯ ಡಾಲರ್ (ಸುಮಾರು 2,240 ಕೋಟಿ ರೂಪಾಯಿ) ...
ದ್ವೇಷ ಭಾಷಣ ದೇಶದ್ರೋಹಿ ಹೇಳಿಕೆಗಿಂತ ಭಿನ್ನ: ಸುಪ್ರೀಂ
ದ್ವೇಷ ಭಾಷಣಗಳನ್ನು ಮಾಡುವವರು ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿಯನ್ನುಂಟು ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಮಗಳನ್ನು ...
ಟೇಕ್‌ಆಫ್‌ಗೆ ಅನುಮತಿ ನೀಡದ ಎಟಿಸಿ; ರಾಹುಲ್ ಗಾಂಧಿ ಹೆಲಿಕಾಪ್ಟರ್ ಹಾರಾಟ ತಾತ್ಕಾಲಿಕ ಸ್ಥಗಿತ
ವಾಯು ಸಂಚಾರ ನಿಯಂತ್ರಣ(ಎಟಿಸಿ) ಟೇಕ್ ಆಫ್;ಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ...
5.6 ಲಕ್ಷ ಭಾರತೀಯರು ಶ್ರೀಮಂತ ದೇಶಗಳಿಗೆ ವಲಸೆ
ಅಮೆರಿಕ, ಇಂಗ್ಲೆಂಡ್ ಮತ್ತು ಕೆನಡಾದಥ ದೇಶಗಳಿಗೆ ವಲಸೆ ಹೋಗುವ ಪ್ರವೃತ್ತಿ ಭಾರತೀಯರಲ್ಲಿ ಹೆಚ್ಚಿದ್ದು, 2022ರಲ್ಲಿ ಒಟ್ಟು 5.6 ಲಕ್ಷ ಮಂದಿ ...
'ಬುಲ್ಡೋಜರ್ ಅನ್ಯಾಯ'ದ ವಿರುದ್ಧ ಸುಪ್ರೀಂ ಕೆಂಡ: ಸರಕಾರ ನ್ಯಾಯಾಂಗದ ಕೆಲಸ ಮಾಡುವಂತಿಲ್ಲ
ಸುಪ್ರೀಂ ಕೋರ್ಟ್ ಬುಧವಾರ 'ಬುಲ್ಡೋಜರ್ ಅನ್ಯಾಯ;ದ ಪ್ರವೃತ್ತಿಯ ವಿರುದ್ಧ ಕೆಂಡಕಾರಿದೆ.
ವಕ್ಫ್ ಜೆಪಿಸಿಯ ಸಭೆಗಳಿಗೆ ಪ್ರತಿಪಕ್ಷ ಸದಸ್ಯರಿಂದ ಬಹಿಷ್ಕಾರ; ಸಂಸದ ಕಲ್ಯಾಣ್ ಬ್ಯಾನರ್ಜಿ ಘೋಷಣೆ
ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಮುಂದಿನ ಸುತ್ತಿನ ಸಭೆಗಳನ್ನು ಪ್ರತಿಪಕ್ಷಗಳ ಸದಸ್ಯರು ಬಹಿಷ್ಕರಿಸುತ್ತಾರೆ ...
ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು ಗಳಿಸಿದ ಕರ್ನಾಟಕ.
ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...
ವಿವಿ ಫುಟ್ಬಾಲ್ ತಂಡಕ್ಕೆ ಇಬ್ಬರು ಅಂಜುಮನ್ ವಿದ್ಯಾರ್ಥಿಗಳು ಆಯ್ಕೆ.
ಭಟ್ಕಳ: ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಫುಟ್ಬಾಲ್ ತಂಡಕ್ಕೆ ಯೂನಿವರ್ಸಿಟಿ ಬ್ಲೂ ಆಟಗಾರರಾಗಿ ಭಟ್ಕಳದ ಅಂಜುಮನ್ ಪದವಿ ...
ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶ
2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್; ನೀರಜ್ ಚೋಪ್ರಾಗೆ ಐತಿಹಾಸಿಕ ಬೆಳ್ಳಿ
ಹಾಲಿ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಮೊತ್ತ ಮೊದಲ ...
ಅಂಕೋಲಾದಲ್ಲಿ ಕಾರು ಪಲ್ಟಿ. ಚಾಲಕ ಸಾವು. ಇನ್ನೋರ್ವ ಗಂಭೀರ
ಅಂಕೋಲಾ : ಜಾನುವಾರು ತಪ್ಪಿಸಲು ಹೋಗಿ ಕಾರೊಂದು ನಿಯಂತ್ರಣ ತಪ್ಪಿ ಚಾಲಕ ಸಾವನ್ನಪ್ಪಿದ ಘಟನೆ ಅಂಕೋಲಾ ತಾಲೂಕಿನ ಕೊಡಸಣಿ ಕ್ರಾಸ್ ಬಳಿ ...
ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ
ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೆ ಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ನವೆಂಬರ್ 24 ರಂದು ಬೃಹತ್ ...
ಕಾರವಾರ: ಜಿಲ್ಲೆಯಲ್ಲಿ ಮಾನ್ಯ ಉಪಮುಖ್ಯ ಮಂತ್ರಿಗಳ ಪ್ರವಾಸ
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನ.21 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ಮಧ್ಯಾಹ್ನ 3.30 ಗಂಟೆಗೆ ...
ಭಟ್ಕಳ:ಸಚಿವ ಮಂಕಾಳ ಎಸ್ ವೈದ್ಯ ನೇತೃತ್ವದಲ್ಲಿ ಕೊಣಾರ ಗ್ರಾಮದಲ್ಲಿ ನಡೆದ ಜನಸ್ಪಂದನ ಸಭೆ
ಭಟ್ಕಳ:ಸಚಿವ ಮಂಕಾಳ ಎಸ್ ವೈದ್ಯ ನೇತೃತ್ವದಲ್ಲಿ ಕೊಣಾರ ಗ್ರಾಮದಲ್ಲಿ ನಡೆದ ಜನಸ್ಪಂದನ ಸಭೆ
ತಂಬಾಕು ಮುಕ್ತ ಯುವ ಅಭಿಯಾನ ಜಾಥಾಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಾಲನೆ
ತಂಬಾಕು ಮುಕ್ತ ಯುವ ಅಭಿಯಾನ ಜಾಥಾಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಾಲನೆ
ಭಟ್ಕಳ ಪುರಸಭೆಗೆ ಲೋಕಾಯುಕ್ತ ದಾಳಿ. ಲಂಚ ಪಡೆಯುತ್ತಿದ್ದ ಮುಖ್ಯಾಧಿಕಾರಿ ಬಲೆಗೆ
ಭಟ್ಕಳ : ಪುರಸಭೆ ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ. ...