ದೇಗುಲ ಪ್ರವೇಶಿಸಿದ್ದಕ್ಕೆ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಸವರ್ಣೀಯರಿಂದ ಹಲ್ಲೆ;21 ಮಂದಿಯ ಬಂಧನ

Source: Vb | By I.G. Bhatkali | Published on 16th September 2024, 7:27 AM | State News |

ಬಾಗಲಕೋಟೆ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ಹಲ್ಲೆಗೊಳಗಾದವರನ್ನು ಉಗಲವಾಟ ಗ್ರಾಮದ ಅರ್ಜುನ್ ಮಾದರ ಎಂದು ಗುರುತಿಸಲಾಗಿದೆ. ಈತ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಿಗೌಡ ಸತ್ಯನ್ನವರ, ಮಂಜುನಾಥ ಮೂಲಿಮನಿ ಸೇರಿದಂತೆ ಒಟ್ಟು 21 ಜನರ ಮೇಲೆ ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಒಟ್ಟು 21 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಜಿಲ್ಲಾಡಳಿತ ವತಿಯಿಂದ ಸ್ಥಳಕ್ಕೆ ಭೇಟಿ ನೀಡಿ, ಎರಡು ಸಮುದಾಯದವರನ್ನು ಸೇರಿಸಿ, ಮಾತುಕತೆ ಮಾಡಿ ಸೌಹಾರ್ದದಿಂದ ಇರುವಂತೆ ಮನವಿ ಮಾಡಿಕೊಳ್ಳಲಾಗುವುದು ಎಂದು ಎಸ್‌ಪಿ ಅಮರನಾಥ್ ರೆಡ್ಡಿ ತಿಳಿಸಿದ್ದಾರೆ.

ವಿವರ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ದ್ಯಾಮವ್ವ ದೇವಿಯ ಗುಡಿ ಪ್ರವೇಶ ಮಾಡಿದ್ದಾನೆ ಎಂದು ಸವರ್ಣೀಯರು ದಲಿತ ಯುವಕನಿಗೆ ಜಾತಿ ನಿಂದನೆ ಮಾಡಿ, ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಥಳಿತಕ್ಕೊಳಗಾಗಿರುವ ಅರ್ಜುನ್ ಮಾದರ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ.

Read These Next

ವಿಶ್ವದಾಖಲೆಯ ಪ್ರಜಾಪ್ರಭುತ್ವದ ಸರಪಳಿ; 2,500 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ಸರಪಳಿ ಯಶಸ್ವಿ; ಸಿಎಂ, ಸಚಿವರು, ಶಾಸಕರು ಸಹಿತ 31 ಜಿಲ್ಲೆಗಳಿಂದ ಲಕ್ಷಾಂತರ ನಾಗರಿಕರು, ವಿದ್ಯಾರ್ಥಿ-ಯುವಜನರು ಭಾಗಿ

ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆಯು ಹಮ್ಮಿಕೊಂಡಿದ್ದ ಮಾನವ ಸರಪಳಿ ...

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗಾಗಿ ಜಿಲ್ಲಾಡಳಿತಕ್ಕೆ ಸಮಗ್ರ ಮಾರ್ಗಸೂಚಿಗಳು

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಬೀದರ್‍ನಿಂದ ಚಾಮರಾಜನಗರದವೆರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ...

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ಹಿಂಸೆಯನ್ನು ಅಳವಡಿಸಿ, ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಮಾಧ್ಯಮಗಳಲ್ಲಿ ಪ್ರಸಾರ ...