ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಘ, ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ, ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ನಡೆದ ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್ ಶನಿವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಜಿಲ್ಲಾ ಸರ್ಜನ್ ಶಿವಾನಂದ ಕುಡ್ತರಕರ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಅರ್ಚನಾ ನಾಯಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ್ ಕನ್ನಕ್ಕನವರ್ ಹಾಗೂಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯಕೀಯ ಕಾಲೇಜು ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.