ಪೊಲೀಸರೊಂದಿಗಿನ ವಾಗ್ವಾದ ; ಆತ್ಮಹತ್ಯೆಗೆ ಶರಣಾದ ನಿವೃತ್ತ ಬ್ಯಾಂಕ್ ಉದ್ಯೋಗಿ

Source: S O news | By Staff Correspondent | Published on 19th October 2023, 9:58 PM | Coastal News |

ಭಟ್ಕಳ: ಪೊಲೀಸ್ ಠಾಣೆಯಲ್ಲಿ ನಡೆದ ವಾಗ್ವಾದದ ನಂತರ ಮನೆಗೆ ತೆರಳಿದ ವ್ಯಕ್ತಿಯೊಬ್ಬರು ತಮ್ಮ ಮನೆಯ ಕೋಣೆಯೊಂದರಲ್ಲಿ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಭಟ್ಕಳ ನಗರಠಾಣೆಯ ಪಿ.ಎಸ್.ಐ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.  

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು  ತಾಲೂಕಿನ ಮಣಕುಳಿ ನಿವಾಸಿ ನಿವೃತ್ತ ಬ್ಯಾಂಕ್ ಉದ್ಯೋಗಿ ಮಾರುತಿ ನಾಗಪ್ಪ ನಾಯ್ಕ್ (63) ಎಂದು ಗುರುತಿಸಲಾಗಿದೆ.

ಈ ಘಟನೆ ತಾಲೂಕಿನ ಹಾಡುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಸ್ರೋಳಿಯಲ್ಲಿ ಬುಧವಾರ ನಡೆದಿದ್ದು  ಗುರುವಾರ ಬೆಳಕಿಗೆ ಬಂದಿದೆ.

ಬುಧವಾರ ಸಂಜೆ ಐದು ಗಂಟೆ ಸುಮಾರಿಗೆ ಮಾರುತಿ ನಾಯ್ಕರ ಬೈಕ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಈ ಪ್ರಕರಣದಲ್ಲಿ ಪೊಲೀಸರು ಬೈಕ್ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.  ಪೊಲೀಸರು ಮತ್ತು ಮಾರುತಿ ನಾಯ್ಕರ ನಡುವೆ ವಾಗ್ವಾದ  ನಡೆದಿದೆ. ಬೈಕ್ ಮರಳಿ  ಕೊಡಲು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಮಾರುತಿ ನಾಯ್ಕ್ ಅದನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಮನಸ್ಸಿಗೆ ಹಚ್ಚಿಕೊಂಡಿದ್ದಾರೆ. ಇದೇ ಕಾರಣಕ್ಕೆ ಹಾಡುವಳ್ಳಿಯ ಗ್ರಾ.ಪಂ ವ್ಯಾಪ್ತಿಯ ಹಸ್ರೋಳಿಯ ತನ್ನ ಹಳೆಯ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆತ್ಮಹತ್ಯೆಗೂ ಮುನ್ನ ಮಾರುತಿ ನಾಯ್ಕ್ ಪೊಲೀಸರ ಜತೆಗಿನ ವಾಗ್ವಾದ ಹಾಗೂ ಅಗೌರವ ತೋರಿದ ಬಗ್ಗೆ ದೂರವಾಣಿಯಲ್ಲಿ ಮಾತನಾಡಿದ್ದು ಆ ಸಂಭಾಷಣೆ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ ಎಂದು ವರದಿಯಾಗಿದೆ.   

ಮೃತರಿಗೆ ಪತ್ನಿ, ಒಬ್ಬ ಗಂಡು ಮತ್ತು ಹೆಣ್ಣು ಮಕ್ಕಳಿದ್ದು, ಅವರು ಮಣ್ಕುಳಿಯಲ್ಲಿ ವಾಸವಾಗಿದ್ದಾರೆ, ಆದರೆ ಮಾರುತಿ ನಾಯ್ಕ್ ಅವರು ತಮ್ಮ ಹಳೆಯ ಮನೆಯಾದ ಹಸ್ರೋಳಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಭಟ್ಕಳ ನಗರ ಪೊಲೀಸ್ ಠಾಣೆಯ ಪಿಎಸ್ಐ ವಿರುದ್ಧ ಭಟ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read These Next

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್, ಇತರ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್

ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಮರಳು ಸಮಸ್ಯೆ ಶಾಶ್ವತ ಪರಿಹಾರವನ್ನು ಕೊಡಲು ಕಾರ್ಮಿಕರ ಒಕ್ಕೂಟದ ಆಗ್ರಹ

ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಮೂಲ ವಸ್ತುವಾಗಿ ಅತೀ ಮುಖ್ಯ ಪಾತ್ರವಹಿಸಿದೆ. ಆದರೆ, ಸರಕಾರ ಮತ್ತು ಸ್ಥಳೀಯಾಡಳಿತದ ಅವೈಜ್ಞಾನಿಕ ...

ಕಾರವಾರ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೊಂದಣಿ ಕೇಂದ್ರ ತೆರೆಯಿರಿ : ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ

ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಲ್ಲಿ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡುವ ಕುರಿತಂತೆ, ನೊಂದಣಿ ...

ಕಾರವಾರ: ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ : ಎಸ್.ಕೆ. ವಂಟಿಗೋಡಿ

ವಿದ್ಯಾಭ್ಯಾಸಕ್ಕಾಗಿ ತಮ್ಮ ಪೋಷಕರನ್ನು ಬಿಟ್ಟು ಬಂದು ಹಾಸ್ಟೆಲ್ ಗಳಲ್ಲಿ ನೆಲೆಸಿ, ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ...