ಉತ್ತರಕನ್ನಡ ಮೂಲದ ತೇಜಸ್ವಿ ನಾಯ್ಕ ಎಚ್. ಡಿ. ಕುಮಾರಸ್ವಾಮಿ ಆಪ್ತ ಕಾರ್ಯದರ್ಶಿ.

Source: S O News | By Laxmi Tanaya | Published on 24th June 2024, 7:05 PM | State News | Don't Miss |

ಭಟ್ಕಳ : ಉತ್ತರಕನ್ನಡ ಜಿಲ್ಲೆಯಲ್ಲಿ ಹುಟ್ಟಿ ಬೆಳೆದ ಇಬ್ಬರೂ ಅಧಿಕಾರಿಗಳು ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಮಧ್ಯಪ್ರದೇಶ ಕೇಡರನ ಐ.ಎ.ಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನವರಾದ ಇವರು ಮಧ್ಯಪ್ರದೇಶದ ರ‍್ವಾನಿ ಹಾಗೂ ಬೆತುಲನಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮಧ್ಯಪ್ರದೇಶದಲ್ಲಿ ಆಡಳಿತ ಸುಧಾರಣೆಯಲ್ಲಿ ಖಡಕ್ ಅಧಿಕಾರಿಯೆಂದೇ ಹೆಸರುವಾಸಿಯಾಗಿದ್ದರು. ಕಳೆದ ಬಾರಿ ಮೋದಿ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದ ನರೇಂದ್ರ ಸಿಂಗ್ ತೋಮರ್ ಹಾಗೂ ಅರ್ಜುನ ಮುಂಡಾ ಅವರ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸಿದ್ದ ಅವರಿಗೆ ಈ ಬಾರಿ ಎಚ್.ಡಿ ಕುಮಾರಸ್ವಾಮಿ ಅವರ ಕೈಗಾರಿಕೆಗೆ ಖಾತೆಯ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ. ಇವರ ಪತ್ನಿ ಸ್ವಾತಿ ಮೀನಾ ನಾಯ್ಕ ಕೂಡ ಐ.ಎ.ಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕೇಂದ್ರ ಸರ್ಕಾರದ ಜಲ್ ಜೀವನ್ ಮೀಷನ್ ಇದರ ಜೆ.ಎಸ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಿವಾಸಿಯಾಗಿರುವ ರಾಜೇಶ ನಾಯ್ಕ ಐ.ಎಪ್.ಎಸ್ ಶ್ರೇಣಿಯ ಅಧಿಕಾರಿಯಾಗಿದ್ದು, ಪ್ರಸ್ತುತ ಭಾರತದ ಉಪರಾಷ್ಟ್ರಪತಿ ಜಗದೀಪ ಧನಕರ್ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಜಪಾನ್ ಹಾಗೂ ಅಮೇರಿಕದಲ್ಲಿ ಕಾರ್ಯನಿರ್ವಹಿಸಿದ ಬಳಿಕ ರಿಜಿನಲ್ ಪಾಸ್ಪೋಟರ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಮೋದಿ ಅವರು ಜಪಾನ್ ಭೇಟಿ ಸಂದರ್ಭದಲ್ಲಿ ಅಲ್ಲಿನ ಭಾಷಾ ಪರಿವರ್ತಕರಾಗಿ ಅವರ ಜೊತೆ ಪ್ರಯಾಣ ಬೆಳೆಸಿದ್ದರು.

Read These Next

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...

ಬೆಂಗಳೂರು: ರಾಷ್ಟ್ರ ದಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾನಿಲಯವು ಸಂಶೋಧನೆ, ಅಭಿವೃದ್ಧಿಯಲ್ಲಿ ಪ್ರಮಖ ಪಾತ್ರ ವಹಿಸಿದೆ : ಕೆ.ಎಚ್.ಮುನಿಯಪ್ಪ

ರಾಷ್ಟ್ರದಲ್ಲಿ ನಮ್ಮ ಕೃಷಿ ವಿಶ್ವವಿದ್ಯಾನಿಲಯವು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಸಂಶೋಧನೆ ಮತ್ತು ಅಭಿವೃಧ್ಧಿಯಲ್ಲಿ ಪ್ರಮುಖ ...

ಬೆಂಗಳೂರು: ಭಾರಿ ಮಳೆಯಿಂದ ನಗರ ಜಲಾವೃತ; ಯಲಹಂಕ, ಟೆಕ್ ಪಾರ್ಕ್‌ಗಳು ಮತ್ತು ರೈಲು ಸೇವೆಗಳು ತತ್ತರಿಸಿತು

ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರವು ಜಲಾವೃತಗೊಂಡಿದ್ದು, ನಾಗರಿಕರ ದೈನಂದಿನ ಜೀವನ ಸಂಪೂರ್ಣ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...