ಕಾರವಾರ: ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ

Source: S O News | By MV Bhatkal | Published on 6th November 2024, 1:25 AM | Coastal News |

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ,ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಮುಂಡಗೋಡು, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ 15 ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.  

ನವೆಂಬರ್ 6 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು,ನ.13 ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಮತದಾನದ ಅವಶ್ಯವಿದ್ದಲ್ಲಿ,ನ.23 ರಂದು ಬೆಳಗ್ಗೆ 7 ಗಂಟೆಯಿAದ ಸಾಯಂಕಾಲ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದಲ್ಲಿ ನ. 25 ರಂದು ನಡೆಸಲಾಗುವುದು. ನ.26 ರಂದು ಬೆ.8 ಗಂಟೆಗೆ ಮತಗಳ ಎಣಿಕೆಯ ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಅನುಸೂಚಿತ ಜಾತಿ ಮತ್ತು ಪಂಗಡ ಉಪ ಹಂಚಿಕೆ ಯೋಜನೆಯಲ್ಲಿ 100% ಗುರಿ ಸಾಧಿಸಿ : ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಅನುಸೂಚಿತ ಜಾತಿ ಉಪ ಹಂಚಿಕೆ ಮತ್ತು ಅನುಸೂಚಿತ ಪಂಗಡ ಉಪ ಹಂಚಿಕೆ ...

ಭಟ್ಕಳ: ದೀಪಾವಳಿ ಟ್ರೋಪಿ 2024-25 ರ ತಾಲೂಕಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಚಾಲನೆ

ಭಟ್ಕಳ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದೀಪಾವಳಿ ಟ್ರೋಪಿ 2024-25 ರ ತಾಲೂಕಾ ಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ...

ಭಟ್ಕಳ: ಜಾಲಿಕೋಡಿಯಲ್ಲಿ ಒಂದೇ ಕುಟುಂಬದ ಮೂವರ ಮೇಲೆ ಹೆಜ್ಜೇನು ದಾಳಿ:70 ವರ್ಷದ ವೃದ್ಧೆ ಸ್ಥಿತಿ ಗಂಭೀರ

ಇಲ್ಲಿನ ಜಾಲಿಕೋಡಿಯಲ್ಲಿ ಒಂದೇ ಕುಟುಂಬದ ಮೂವರ ಮೇಲೆ ಹೆಜ್ಜೇನು ದಾಳಿ ಮಾಡಿದರೆ ಇನ್ನೊಂದು ಪ್ರಕರಣ ಬಂಗಾರಮಕ್ಕಿ ಕ್ರಾಸ್ ಬಳಿ ...

ಭಟ್ಕಳದಲ್ಲಿ ಅಲ್ಪಸಂಖ್ಯಾತ ಮಹಿಳಾ ಅಧ್ಯಕ್ಷೆ ವಿರುದ್ಧ ಅಪಪ್ರಚಾರ ನಡೆಸುತ್ತಿರುವವವ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್.ಡಿ.ಪಿ.ಐ ಆಗ್ರಹ

ಭಟ್ಕಳ: ಭಟ್ಕಳ ತಾಲೂಕಿನ ಜಾಲಿಪಟ್ಟಣ ಪಂಚಾಯತ್ ನ ಏಕೈಕ ಅಲ್ಪಸಂಖ್ಯಾತ ಮಹಿಳಾ ಅಧ್ಯಕ್ಷೆ ಕಾಝಿಯಾ ಅಪ್ಸ ಹುಝೈಫಾ ವಿರುದ್ಧ ಸಾಮಾಜಿಕ ...