ಬೆಂಗಳೂರು ಜಲ ಮಂಡಳಿಯಿಂದ ನೀರಿನ ಅದಾಲತ್

Source: S O News | By I.G. Bhatkali | Published on 17th October 2024, 12:31 PM | State News |

ಬೆಂಗಳೂರು: ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2, ವಾಯುವ್ಯ-4, ಕೇಂದ್ರ 1-2, ಈಶಾನ್ಯ - 2, ಉತ್ತರ 1-2, ಉತ್ತರ 2-2, ದಕ್ಷಿಣ 1-2, ದಕ್ಷಿಣ 2–2, ನೈರುತ್ಯ -2, ನೈರುತ್ಯ -5, ಪೂರ್ವ 1-3 ಮತ್ತು ಪೂರ್ವ 2-3, ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಅಕ್ಟೋಬರ್ 18 ರಂದು ಬೆಳಿಗ್ಗೆ 9.30 ಗಂಟೆಯಿಂದ 11.00 ಗಂಟೆಯವರೆಗೆ ನೀರಿನ ಅದಾಲತ್‍ನ್ನು ನಡೆಸಲಾಗುವುದು.

ನೀರಿನ ಅದಾಲತ್ ಸೇವಾಠಾಣೆಗಳು ಹೆಚ್.ಎಂ.ಟಿ ಪೀಣ್ಯ, ದಾಸರಹಳ್ಳಿ, ಪೀಣ್ಯ, ಲಿಂಗಧೀರನಹಳ್ಳಿ, ಅಂದರಹಳ್ಳಿ, ಹೆಗ್ಗನಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಫ್ರೇಜರ್‍ಟೌನ್, ಮಚಲಿಬೆಟ್ಟ, ಪಿಳ್ಳಣ್ಣಗಾರ್ಡನ್ 1&2, ಕೆಂಪೇಗೌಡ ಟವರ್, ಕುಮಾರ ಪಾರ್ಕ್, ಜಯಮಹಲ್, ಸಂಜಯನಗರ, ನ್ಯೂ ಬಿ.ಇ.ಎಲ್. ರಸ್ತೆ, ಆರ್.ಟಿ.ನಗರ ಕಾವಲ್ ಬೈರಸಂದ್ರ, ಗಂಗಾನಗರ, ಆನಂದನಗರ, ಮನೋರಾಯನಪಾಳ್ಯ, ಸಿಂಗಾಪುರ, ವಿದ್ಯಾರಣ್ಯಪುರ, ಸಹಕಾರನಗರ, ಹೆಚ್.ಎಸ್.ಆರ್-1, ಕೋಡಿಚಿಕ್ಕನಹಳ್ಳಿ, ಬೊಮ್ಮನಹಳ್ಳಿ, ಕೂಡ್ಲು, ಬೇಗೂರು, ವಿ.ವಿ.ಪುರಂ, ಸುಧಾಮನಗರ-2, ಕೆಂಪೇಗೌಡ ನಗರ, ಜಗಜೀವನರಾಮ್ ನಗರ, ಚಾಮರಾಜಪೇಟೆ, ಬನಗಿರಿನಗರ, ಬಿ.ಎಸ್.ಕೆ-1 &2, ಕುಮಾರಸ್ವಾಮಿ ಲೇಔಟ್, ಇಸ್ರೋ ಲೇಔಟ್, ಪೂರ್ಣ ಪ್ರಜ್ಞಾ ಲೇಔಟ್, ಪೂರ್ವ ವಿಲೇಜ್-2-1,& 2-2, ಕಾಡುಗೋಡಿ ವರ್ತೂರು, ಐ.ಎಸ್.ಪಿ.ಎಸ್. ಹೊರಮಾವು, ರಾಜಾಕೆನಲ್  ವ್ಯಾಪ್ತಿಯಲ್ಲಿ ನೀರಿನ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ಸಹಾಯವಾಣಿ 1916ಗೆ ಕರೆ ಮಾಡಿ ದೂರುಗಳನ್ನು ದಾಖಲಿಸಬಹುದು. ಹಾಗೂ ವಾಟ್ಸ್‍ಆಫ್ ಸಂಖ್ಯೆ 8762228888 ಸಂದೇಶದ ಮೂಲಕ ದೂರನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಜಲ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...

ಬೆಂಗಳೂರು: ರಾಷ್ಟ್ರ ದಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾನಿಲಯವು ಸಂಶೋಧನೆ, ಅಭಿವೃದ್ಧಿಯಲ್ಲಿ ಪ್ರಮಖ ಪಾತ್ರ ವಹಿಸಿದೆ : ಕೆ.ಎಚ್.ಮುನಿಯಪ್ಪ

ರಾಷ್ಟ್ರದಲ್ಲಿ ನಮ್ಮ ಕೃಷಿ ವಿಶ್ವವಿದ್ಯಾನಿಲಯವು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಸಂಶೋಧನೆ ಮತ್ತು ಅಭಿವೃಧ್ಧಿಯಲ್ಲಿ ಪ್ರಮುಖ ...

ಬೆಂಗಳೂರು: ಭಾರಿ ಮಳೆಯಿಂದ ನಗರ ಜಲಾವೃತ; ಯಲಹಂಕ, ಟೆಕ್ ಪಾರ್ಕ್‌ಗಳು ಮತ್ತು ರೈಲು ಸೇವೆಗಳು ತತ್ತರಿಸಿತು

ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರವು ಜಲಾವೃತಗೊಂಡಿದ್ದು, ನಾಗರಿಕರ ದೈನಂದಿನ ಜೀವನ ಸಂಪೂರ್ಣ ...

ಸಿಎಂ ಆಗಿ ಅತಿ ಹೆಚ್ಚು ಬಾರಿ ಅಂಬಾರಿ ಏರಿದ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಭಾಗ್ಯ: ರಾಜ್ಯದ ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಅದ್ಧೂರಿ ಮತ್ತು ಅಚ್ಚುಕಟ್ಟಾದ ದಸರಾ ಆಯೋಜಿಸಿದ ಜಿಲ್ಲಾಡಳಿತ ಶ್ರಮ ಮತ್ತು ಶಿಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...