ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 2 ಕಾಳಜಿ ಕೇಂದ್ರಗಳಲ್ಲಿ 59 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.

Source: S O News | By I.G. Bhatkali | Published on 7th July 2024, 11:29 PM | Coastal News |

ಕಾರವಾರ: ಜಿಲ್ಲೆಯಲ್ಲಿ ಭಾನುವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು,  ಹೊನ್ನಾವರ ತಾಲ್ಲೂಕಿನಲ್ಲಿ 2 ಕಾಳಜಿ ಕೇಂದ್ರಗಳಲ್ಲಿ 59 ಮಂದಿ ಆಶ್ರಯ ಪಡೆದಿದ್ದು, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

 ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ  ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬ0ಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ.

 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. 
 
ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಿಸಲಾಗಿದೆ 


ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 3 ಮನೆಗಳಿಗೆ ತೀವ್ರ ಹಾನಿ ಹಾಗೂ 4 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹೊನ್ನಾವರ ತಾಲ್ಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯ ಗುಂದ, ಚಿಟ್ಟಿಹಿತ್ಲ, ದೇವದಳ್ಳಿಯ ನೇರಪೀಡಿತ ಪ್ರದೇಶದಲ್ಲಿ 13 ಕುಟುಂಬಗಳನ್ನು  NDRF ತಂಡದ ಮೂಲಕ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

Read These Next

ಕಾರವಾರ: ಗ್ರಾಮ ಪಂಚಾಯತಿಗಳಲ್ಲಿ "ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ" ಅಭಿಯಾನ : ಈಶ್ವರ ಕಾಂದೂ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಉತ್ತರ ಕನ್ನಡ ಜಿಲ್ಲೆಯ 12 ತಾಲ್ಲೂಕುಗಳ ಎಲ್ಲ ಗ್ರಾಮ ...

ಉತ್ತರ ಕನ್ನಡದಲ್ಲಿ ಆಸ್ತಿಗಳ ನೋಂದಣಿಗೆ ಇ-ಆಸ್ತಿ ಮತ್ತು ಕಾವೇರಿ ತಂತ್ರಾಂಶದ ಸಂಯೋಜನೆ: ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ...