ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರಾಜಿನಾಮೆ ನಿಡ್ತಾರಾ? ಹಾಗಾದ್ರೆ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ?

Source: SOnews | By Staff Correspondent | Published on 15th September 2024, 4:02 PM | National News |

 

ಹೊಸದಿಲ್ಲಿ : ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ನಿಜವಾಗ್ಲೂ ಕೇಜ್ರಿವಾಲ್ ರಾಜಿನಾಮೆ ನಿಡ್ತಾರಾ? ಅಥವಾ ಇದೊಂದು ರಾಜಕೀಯಾ ಗಿಮಿಕಾ? ಎಂಬ ಚರ್ಚೆ ಶುರುವಾಗಿದ್ದು ಮುಂದಿನ ಮುಖ್ಯಮಂತ್ರಿ ಯಾರು ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಕಾಡಲು ಆರಂಭಿಸಿದೆ.

ಅದೇನೆ ಇರಲಿ ಇಂದು ದಿಲ್ಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಹತ್ವದ ಘೋಷಣೆಯನ್ನು ಕೇಜ್ರಿವಾಲ್ಮಾಡಿದ್ದಾರೆ.

ಎರಡು ದಿನಗಳ ನಂತರ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಜನರು ತೀರ್ಪು ಪ್ರಕಟಿಸುವವರೆಗೂ ನಾನು ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ದಿಲ್ಲಿಯಲ್ಲಿ ಚುನಾವಣೆಗೆ ತಿಂಗಳುಗಳು ಬಾಕಿ ಇವೆ, ನನಗೆ ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ. ಈಗ ನನಗೆ ಜನತಾ ನ್ಯಾಯಾಲಯದಿಂದ ನ್ಯಾಯ ಸಿಗುತ್ತದೆ. ಜನರ ಆದೇಶದ ನಂತರವೇ ನಾನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆಎಂದವರು ಹೇಳಿದ್ದಾರೆ.

ಕೇಜ್ರಿವಾಲ್ ನಿರಪರಾಧಿ ಅಥವಾ ಅಪರಾಧಿಯೇ ಎಂದು ನಾನು ದಿಲ್ಲಿಯ ಜನತೆಯಲ್ಲಿ ಕೇಳಲು ಬಯಸುತ್ತೇನೆ. ನಾನು ಕೆಲಸ ಮಾಡಿದ್ದರೆ ನನಗೆ ಮತ ನೀಡಿ, ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಇನ್ನೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ದಿಲ್ಲಿಯಲ್ಲಿ ಅವಧಿಪೂರ್ವ ಚುನಾವಣೆ ನಡೆಸಬೇಕು, ನವೆಂಬರ್ ನಲ್ಲಿ ನಡೆಯಲಿರುವ ಮಹರಾಷ್ಟ್ರ ವಿಧಾನಸಭೆ ಚುನಾವಣೆಯ ಜೊತೆ ದಿಲ್ಲಿಯಲ್ಲೂ ಚುನಾವಣೆ ನಡೆಸಬೇಕು ಎಂದು ಕೇಜಿವಾಲ್ಆಗ್ರಹಿಸಿದ್ದಾರೆ.

 

Read These Next

ಕೇಜ್ರವಾಲ್‌ಗೆ ಜಾಮೀನು; ಬಂಧನದ ಕಾನೂನುಬದ್ಧತೆ ಬಗ್ಗೆ ನ್ಯಾಯಾಧೀಶರಲ್ಲಿ ಭಿನ್ನಾಭಿಪ್ರಾಯ

ಅಭಿವೃದ್ಧಿ ಹೊಂದಿದ ಸಮಾಜಕ್ಕಾಗಿ ಸುಧಾರಿತ ನ್ಯಾಯವ್ಯವಸ್ಥೆಯೊಂದು ಯೊಂದು ಬೇಕು, ವಿಚಾರಣೆ ನಡೆಯುತ್ತಿರುವಾಗ ಆರೋಪಿಗಳನ್ನು ...

“ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ” ಸೆ.13-22 ರಾಜ್ಯವ್ಯಾಪಿ “ಸೀರತ್’ ಅಭಿಯಾನ

ಬೆಂಗಳೂರು: ಪ್ರವಾದಿ ಮುಹಮ್ಮದ್ ಅವರ ಜನ್ಮ ತಿಂಗಳ ಪ್ರಯುಕ್ತ ಅವರ ಮಾನವೀಯ ಹಾಗೂ ಚಾರಿತ್ರ್ಯದ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿರುವ ...