ಪತ್ನಿಯ ಕತ್ತು ಸೀಳಿ ಬರ್ಬರ ಕೊಲೆ; ಮುರುಢೇಶ್ವರದಲ್ಲಿ ನಡೆದ ಘಟನೆ, ಕೊಲೆ ಆರೋಪಿ ಲೋಕೇಶ್ ಪೊಲೀಸ್ ವಶಕ್ಕೆ?

Source: S O News | By MV Bhatkal | Published on 17th October 2023, 11:56 PM | Coastal News |

ಭಟ್ಕಳ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ತನ್ನ ಪತ್ನಿಯನ್ನು ಬರ್ಬರವಾಗಿ ಕತ್ತು ಸೀಳಿ ಇರಿದು ಕೊಲೆ ಮಾಡಿದ ಘಟನೆ ತಾಲೂಕಿನ ಮುರ್ಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಭಟ್ಕಳ ತಾಲೂಕಿನ ಮುರ್ಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(೩೦) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ. ಶಿಲ್ಪಿ ಕೆಲಸ ಮಾಡುತ್ತಿದ್ದ ಮುರ್ಡೇಶ್ವರದ ನಾಡವರ ಕೇರಿ ನಿವಾಸಿ ಲೋಕೇಶ ನಾಯ್ಕ ಎಂಬಾತನೆ ಕೊಲೆ ಆರೋಪಿ. ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಲೋಕೇಶ್, ಕಳೆದ ೩ ದಿನದಿಂದ ಸಬ್ಬತ್ತಿ ಕ್ರಾಸನಲ್ಲಿರುವ ಮನೆಯೊಂದರಲ್ಲೊ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದ. ಗಾಯಗೊಂಡ ಮಹಿಳೆ ರಕ್ತದ ಮಡುವಿನಲ್ಲಿ ಹೊರಗೆ ಒಡಿಬಂದು ಬಿದ್ದಿದ್ದಳು. ಇದನ್ನು ಪಕ್ಕದ ಮನೆಯವರು,ಮನೆಯ ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಸಿಪಿಐ ಸಂತೋಷ ಕಾಯ್ಕಿಣಿ ಮತ್ತು ಅವರ ತಂಡ  ಬಲೆ ಬೀಸಿ ಆರೋಪಿ ಲೋಕೇಶ ನಾಯ್ಕ ಖಾಸಗಿ ಹೊಟೆಲೊಂದರಲ್ಲಿ ವಶಕ್ಕೆ ಪಡೆದಿದ್ದಾರೆ. ಪಿಎಸ್ ಐ ಮಂಜುನಾಥ, ಇತರ ಪೊಲೀಸ್‌ ಸಿಬ್ಬಂದಿ ನೇತೃತ್ವದಲ್ಲಿ ‌ಕಾರ್ಯಚರಣೆ ನಡೆದಿದೆ ಸುದ್ದಿ ತಿಳಿಯುತ್ತಿರುಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾವಣೆಗೊಂಡಿದ್ದಾರೆ. ಅಮ್ಮನನ್ನು ಕಳೆದುಕೊಂಡ ಮಕ್ಕಳ, ಹಾಗೂ ಕುಟುಂಬದವರ ರೋದನೆ ಮುಗಿಲು ಮುಟ್ಟಿತ್ತು. ಎಸ್ ಪಿ ವಿಷ್ಣುವರ್ಧನ್, ಡಿವೈ ಎಸ್ ಪಿ ಶ್ರೀಕಾಂತ ಕೆ ಸ್ಥಳಕ್ಕೆ ಬೇಟಿ ನೀಡಿ ಮುಂದಿನ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.

Bhatkal: Mother of Two Brutally Murdered in Murdeshwar

Read These Next

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸತೀಶ್ ಸೈಲ್, ಇತರ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್

ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ: ಮರಳು ಸಮಸ್ಯೆ ಶಾಶ್ವತ ಪರಿಹಾರವನ್ನು ಕೊಡಲು ಕಾರ್ಮಿಕರ ಒಕ್ಕೂಟದ ಆಗ್ರಹ

ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಮೂಲ ವಸ್ತುವಾಗಿ ಅತೀ ಮುಖ್ಯ ಪಾತ್ರವಹಿಸಿದೆ. ಆದರೆ, ಸರಕಾರ ಮತ್ತು ಸ್ಥಳೀಯಾಡಳಿತದ ಅವೈಜ್ಞಾನಿಕ ...

ಕಾರವಾರ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ನೊಂದಣಿ ಕೇಂದ್ರ ತೆರೆಯಿರಿ : ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ

ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಲ್ಲಿ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡುವ ಕುರಿತಂತೆ, ನೊಂದಣಿ ...

ಕಾರವಾರ: ಹಾಸ್ಟೆಲ್ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ : ಎಸ್.ಕೆ. ವಂಟಿಗೋಡಿ

ವಿದ್ಯಾಭ್ಯಾಸಕ್ಕಾಗಿ ತಮ್ಮ ಪೋಷಕರನ್ನು ಬಿಟ್ಟು ಬಂದು ಹಾಸ್ಟೆಲ್ ಗಳಲ್ಲಿ ನೆಲೆಸಿ, ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ...