ಕಾರವಾರ: ಡಿ.2 ರಂದು ವಿಶ್ವ ಏಡ್ಸ್ ದಿನಾಚರಣೆ
ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಡಿ.2 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಹಾಗೂ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.